ದೇಶ

ದೆಹಲಿಯಲ್ಲಿ ರೈತ ಆತ್ಮಹತ್ಯೆ, ಕೇಜ್ರಿವಾಲ್ ಮನೆ ಮುಂದೆ ಬಿಜೆಪಿ, ಕಾಂಗ್ರೆಸ್ ಪ್ರತಿಭಟನೆ

ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯನ್ನು...

ದೆಹಲಿಯಲ್ಲಿ ರೈತ ಆತ್ಮಹತ್ಯೆ, ಕೇಜ್ರಿವಾಲ್ ಮನೆ ಮುಂದೆ ಬಿಜೆಪಿ, ಕಾಂಗ್ರೆಸ್ ಪ್ರತಿಭಟನೆ
ಎಎಪಿ ಪ್ರತಿಭಟನಾ ರ್ಯಾಲಿಯಲ್ಲಿ ಕೇಜ್ರಿವಾಲ್ (ಸಂಗ್ರಹ ಚಿತ್ರ)
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಧರಣಿ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ರ್ಯಾಲಿ ಆಯೋಜಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ದೆಹಲಿ ಪೊಲೀಸ್ ಪ್ರಧಾನ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಉತ್ತರ ದೆಹಲಿಯಲ್ಲಿರುವ ಕೇಜ್ರಿವಾಲ್ ಅವರ ನಿವಾಸ ಬಳಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ 10ಗಂಟೆಯಿಂದ ಧರಣಿ ಕುಳಿತಿದ್ದು, ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ದೆಹಲಿ ಪ್ರಧಾನ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಸಹ ಐಟಿಒದಿಂದ ಕೇಜ್ರಿವಾಲ್ ಅವರ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ.

ಈ ವೇಳೆ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರು, ರೈತನ ಆತ್ಮಹತ್ಯೆ ಘಟನೆಯ ಹಿಂದೆ ಪಿತೂರಿ ಇದೆ ಮತ್ತು ರ್ಯಾಲಿ ಆಯೋಜಕರ ವಿರುದ್ಧ ಕೊಲೆ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.