ಕೇಜ್ರಿವಾಲ್ ಕ್ಷಮೆಯಾಚಿಸಿದ್ರೆ ನನ್ನ ಮಗ ಬದುಕಿ ಬರುತ್ತಾನಾ? ಮೃತ ರೈತನ ತಂದೆ
ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡಿದಕ್ಕೆ ವಿಷಾಧ ವ್ಯಕ್ತಪಡಿಸಿ ದೇಶದ ಕ್ಷಮೆಯಾಚಿಸಿದ್ದ ದೆಹಲಿ

ನವದೆಹಲಿ: ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡಿದಕ್ಕೆ ವಿಷಾಧ ವ್ಯಕ್ತಪಡಿಸಿ ದೇಶದ ಕ್ಷಮೆಯಾಚಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕ್ಷಮೆಯಾಚನೆಯಿಂದ ತನ್ನ ಮಗ ಬದುಕಿ ಬರುತ್ತಾರಾ ಎಂದು ಮೃತ ರೈತ ಗಜೇಂದ್ರ ಸಿಂಗ್ ಅವರ ತಂದೆ ಪ್ರಶ್ನಿಸಿದ್ದಾರೆ.
ಅಲ್ಲದೆ ಪ್ರತಿಭಟನಾ ರ್ಯಾಲಿ ವೇಳೆ ತಮ್ಮ ಮಗ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಪ್ರತಿಭಟನಾ ರ್ಯಾಲಿಯನ್ನು ಮುಂದುವರಿಸಿರುವುದು ಖಂಡನೀಯ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಗಜೇಂದ್ರ ಸಿಂಗ್ ತಂದೆ ಆಗ್ರಹಿಸಿದ್ದಾರೆ.
ಇದೇ ವೇಳೆ ಕೇಜ್ರಿವಾಲ್ ಅವರ ವರ್ತನೆಯನ್ನು ಖಂಡಿಸಿದ ಗಜೇಂದ್ರ ಸಿಂಗ್ ಸಹೋದರಿ ರೇಖಾ, ಕ್ಷಮೆಯಾಚನೆಯಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ. ನನ್ನು ಅಣ್ಣ ನನ್ನು ಕಳೆದುಕೊಂಡಾಗಿದೆ. ಆದರೆ ಆತ್ಮಹತ್ಯೆಯ ನಂತರವೂ ಕೇಜ್ರಿವಾಲ್ ಅವರು ಭಾಷಣ ಮುಂದುವರೆಸಿದ್ದು, ಅವಮಾನೀಯ ಎಂದಿದ್ದಾರೆ. ಅಲ್ಲದೆ ನನ್ನ ಅಣ್ಣ ಆತ್ಮಹತ್ಯೆ ಮಾಡಿಕೊಳ್ಳುವಂತೆ ಉತ್ತೇಜಿಸಲಾಗಿದ್ದು, ಆತ್ಮಹತ್ಯೆಯ ಹಿಂದೆ ಕಾಣದ ಕೈಗಳ ಪಿತ್ತೂರಿ ಅಡಗಿದೆ ಎಂದು ಆರೋಪಿಸಿದ್ದಾರೆ.
ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರಾಜಸ್ಥಾನ ಆರೋಗ್ಯ ಸಚಿವ ರಾಜೇಂದ್ರ ರಾತೋರಿ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡುವಂತೆ ಮೃತ ಗಜೇಂದ್ರ ಸಿಂಗ್ ಚಿಕ್ಕಪ್ಪ ಸ್ಥಳೀಯ ಸರ್ ಪಂಚ್ ಗೋಪಾಲ್ ಸಿಂಗ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


