ನೂತನ ನೇಮಕಾತಿ ನೀತಿಗೆ ವಿರೋಧ: ಕುಲಪತಿಗೆ ದಿಗ್ಭಂಧನ
ಪಶ್ಚಿಮ ಬಂಗಾಳದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ನೂತನ ವಿದ್ಯಾರ್ಥಿ ನೇಮಕಾತಿ ನೀತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು...

ಕೋಲ್ಕತಾ: ಪಶ್ಚಿಮ ಬಂಗಾಳದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ನೂತನ ವಿದ್ಯಾರ್ಥಿ ನೇಮಕಾತಿ ನೀತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ವಿವಿಯ ಕುಲಪತಿಗಳನ್ನೇ ಕೊಠಡಿಯಲ್ಲಿ ಕೂಡಿ ಹಾಕಿರುವ ಘಟನೆ ನಡೆದಿದೆ.
ಸುಮಾರು 50 ಮಂದಿ ವಿದ್ಯಾರ್ಥಿಗಳ ಗುಂಪು ಕೋಲ್ಕತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ಅನುರಾಧ ಲೋಹಿಯಾ ಮತ್ತು ಅವರ ಸಹೊದ್ಯೋಗಿಗಳನ್ನು ಕಾಲೇಜಿನ ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಾರೆ. ಇತ್ತೀಚೆಗೆ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ನೇಮಕಾತಿ ನಿಯಮದಲ್ಲಿ ವಿವಿ ತಂದಿದ್ದ ಬದಲಾವಣೆಗಳನ್ನು ವಿರೋಧಿಸಿರುವ ವಿದ್ಯಾರ್ಥಿಗಳು, ವ್ಯಾಸಂಗ ಮಾಡಿದ ಕಾಲೇಜುಗಳು ನೀಡಿದ ವರದಿಯಾಧಾರದ ಮೇಲೆ ವಿದ್ಯಾರ್ಥಿ ನೇಮಕಾತಿ ಮಾಡುವುದು ಸರಿಯಲ್ಲ. ವಿಶ್ವವಿದ್ಯಾಲಯ ನಿರ್ಧಿಷ್ಟ ಮಾನದಂಡದ ಮೂಲಕ ವಿದ್ಯಾರ್ಥಿಗಳ ನೇಮಕಾತಿ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ನಿನ್ನೆ ಸಂಜೆ 5 ಗಂಟೆಯಿಂದಲೇ ವಿದ್ಯಾರ್ಥಿಗಳು ಕುಲಪತಿಗಳನ್ನು ಕೊಠಡಿಯಲ್ಲಿ ದಿಗ್ಭಂಧಿಸಿದ್ದು, ಹಿರಿಯ ಅಧಿಕಾರಿಗಳು ಎಷ್ಟೇ ಮನವೊಲಿಕೆ ಪ್ರಯತ್ನಿಸಿದರೂ ವಿದ್ಯಾರ್ಥಿಗಳು ತಮ್ಮ ಪಟ್ಟು ಸಲಿಸುತ್ತಿಲ್ಲ ಎಂದು ತಿಳಿದುಬಂದಿದೆ. 10 ದಿನಗಳ ಹಿಂದಷ್ಟೇ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ತನ್ನ ಕಲೆ, ವಿಜ್ಞಾನ, ವಿವಿಧ ವಿಭಾಗಗಳಲ್ಲಿನ ತರಗತಿಗಳಿಗಾಗಿ ನೂತನ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ನಡೆಸುವ ನೇಮಕಾತಿಗೆ ಮುಂದಾಗಿತ್ತು. ವಿವಿಯ ಈ ಬದಲಾದ ಕ್ರಮವನ್ನು ವಿದ್ಯಾರ್ಥಿಗಳು ವಿರೋಧಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


