ದೇಶ

ಡಿ.ಕೆ.ರವಿ ನಿಗೂಢ ಸಾವು ಸಿಬಿಐ ತನಿಖೆ ಚುರುಕು

ಐಎಎಸ್ ಅಧಿಕಾರಿ ಡಿ.ಕೆ. ರವಿ ನಿಗೂಢ ಸಾವಿನ ತನಿಖೆ ಆರಂಭಿಸಿರುವ ಸಿಬಿಐ ಅಧಿಕಾರಿಗಳು ಶುಕ್ರವಾರ ಸಿಐಡಿ ಚೇರಿಗೆ ತೆರಳಿ ಪ್ರಕರಣದ ಬಗೆಗಿನ ಮಾಹಿತಿ...

ಡಿ.ಕೆ.ರವಿ ನಿಗೂಢ ಸಾವು ಸಿಬಿಐ ತನಿಖೆ ಚುರುಕು
ಡಿಕೆ ರವಿ
Published On :

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ. ರವಿ ನಿಗೂಢ ಸಾವಿನ ತನಿಖೆ ಆರಂಭಿಸಿರುವ ಸಿಬಿಐ ಅಧಿಕಾರಿಗಳು ಶುಕ್ರವಾರ ಸಿಐಡಿ ಚೇರಿಗೆ ತೆರಳಿ ಪ್ರಕರಣದ ಬಗೆಗಿನ ಮಾಹಿತಿ ಸಂಗ್ರಹಿಸಿದ್ದಾರೆ.

ತನಿಖಾಧಿಕಾರಿ ಎಎಸ್ಪಿ ಕೃಷ್ಣಮೂರ್ತಿ ಅವರು ಶುಕ್ರವಾರ ಬೆಳಗ್ಗೆ ಸಿಐಡಿ ಕಚೇರಿಗೆ ತೆರಳಿ ಸಿಐಡಿ ಡಿಐಜಿ ಸೌಮೇಂದು ಮುಖರ್ಜಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ರವಿ ಸಾವಿನ ಬಗ್ಗೆ ಡೆಸಿದ ತನಿಖೆಗೆ ಬಂಧಿಸಿದ ವಿಧಿವಿಜ್ಞಾನ ಪ್ರಯೋಗಾಲಯ ವರದಿ, ಲ್ಯಾಪ್‍ಟಾಪ್, ಮೊಬೈಲ್ ಫೋನ್ ಗಳು, ಆದಾಯ ತೆರಿಗೆ ಇಲಾಖೆ ಕಚೇರಿ ಹಾಗೂ ಮನೆಯಿಂದ ವಶಪಡಿಸಿಕೊಂಡ ದಾಖಲೆಗಳು, ರವಿ ಕೋಲಾರ ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ನಡೆಸಿದ ಪ್ರಕರಣಗಳ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ವಿಧಾನಸೌಧಕ್ಕೆ ತೆರಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್‍ರನ್ನು ಭೇಟಿ ಮಾಡಿದ್ದ ಸಿಬಿಐ ಅಧಿಕಾರಿಗಳು ತನಿಖೆಗಾಗಿ ತಾತ್ಕಾಲಿಕ ಕಚೇರಿ ಕೇಳಿದ್ದಾರೆ. ಈ ವೇಳೆ ಸಿಐಡಿಯಲ್ಲೇ ಪ್ರತ್ಯೇಕ ಕಚೇರಿ ಮಾಡಿಕೊಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಆದರೆ, ಸಿಐಡಿಯಿಂದ ಮಾಹಿತಿ ಸೋರಿಕೆಯಾಗಬಹುದು ಎನ್ನುವ ಸಾಧ್ಯತೆ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿರಾಕರಿಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರಿ ಸ್ವಾಮ್ಯದ, ಹೆಚ್ಚಿನ ಭದ್ರತೆ ಇರುವ ಕಚೇರಿಗಳಲ್ಲಿ ವ್ಯವಸ್ಥೆ ಮಾಡಿ ಕೊಡಿ ಎಂದು ಕೇಳಿದ್ದಾರೆಂದು ತಿಳಿದು ಬಂದಿದೆ.

ಎಂಜಿರಸ್ತೆಯಲ್ಲಿರುವಬಹುಮಹಡಿ ಕಟ್ಟಡದಲ್ಲೇ ಕಚೇರಿ ವ್ಯವಸ್ಥೆ ಮಾಡಿಕೊಡುವುದಾಗಿ ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸಿಬಿಐ ಅಧಿಕಾರಿಗಳಿಂದ ಯಾವುದೇ ಉತ್ತರ ಬಂದಿಲ್ಲ ಎನ್ನಲಾಗಿದೆ. ರಾಜ್ಯದಿಂದಲೂ ತನಿಖೆಗೆ ನೆರವು: ರಾಜ್ಯದಲ್ಲಿರುವ ಸಿಬಿಐ ಘಟಕ ಭ್ರಷ್ಟಾಚಾರ ಸಂಬಂಧಿಸಿದ ಪ್ರಕರಣಗಳನ್ನು ಮಾತ್ರ ನಿರ್ವಹಿಸುತ್ತದೆ.

ಐಪಿಸಿ ಕಲಂ ಅನ್ವಯ ದಾಖ ಲಾಗುವ, ಕೊಲೆ, ಅನುಮಾನಾಸ್ಪದ ಸಾವಿನ ಪ್ರಕರಣಗಳ ತನಿಖೆ ರಾಜ್ಯ ಸಿಬಿಐ ಘಟಕದ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ, ರಾಜ್ಯ ಸಿಬಿಐನ ಎಸ್ಪಿ ಸುಬ್ರಮಣ್ಯೇಶ್ವರ್ ರಾವ್ ಅವರು ತನಿಖೆಗೆ ನೆರವು ನೀಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.