ಶೀಘ್ರದಲ್ಲೇ ಮಹಾರಾಷ್ಟ್ರ, ತೆಲಂಗಾಣಕ್ಕೆ ರಾಹುಲ್ ಭೇಟಿ
ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ...

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರಂತೆ. ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸುವುದು ರಾಹುಲ್ ಭೇಟಿಯ ಉದ್ದೇಶ. ರಜಾ ಕಳೆದು ವಾಪಸ್ ಬಂದ ರಾಹುಲ್ ಸಂಸತ್ತಿನಲ್ಲಿ ಎರಡು ಬಾರಿ ಮಾತನಾಡುವ ಮೂಲಕ ಸಕ್ರಿಯವಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ರಾಹುಲ್ ಕೇದರನಾಥ ದೇವಾಲಯಕ್ಕೂ ಭೇಟಿ ನೀಡಿದ್ದರು. ಮಹಾರಾಷ್ಟ್ರ ಮತ್ತು ತೆಲಂಗಾಣ ಪ್ರವಾಸಕ್ಕಾಗಿ ರಾಹುಲ್ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ರಾಹುಲ್‌ನ ಈ ಭೇಟಿ ಒಂದೋ ಪಾದಯಾತ್ರೆ ಇಲ್ಲವೇ ಆತ್ಮಹತ್ಯೆಗೊಳಗಾದ ರೈತರ ಮನೆಗೆ ಭೇಟಿ ನೀಡುವುದಾಗಿರುತ್ತದೆ ಎಂದು ಬಲ್ಲಮೂಲಗಳು ಹೇಳಿವೆ.
ಏತನ್ಮಧ್ಯೆ, ಮುಂದಿನ ವಾರ ನಡೆಯಲಿರುವ ಸಂಸತ್ ಕಲಾಪದಲ್ಲಿ ರಾಹುಲ್ ಬೆಲೆ ಏರಿಕೆ ಬಗ್ಗೆ ಮಾತನಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


