ನೇಪಾಳದಲ್ಲಿ ಭೂಕಂಪ: ಆಸ್ಟ್ರೇಲಿಯಾದ 300 ಜನ ನಾಪತ್ತೆ
ನೇಪಾಳದಲ್ಲಿ ಸಂಭವಿಸಿದ ಮಹಾಭೂಕಂಪದಲ್ಲಿ ಆಸ್ಟ್ರೇಲಿಯಾದ 300 ಪ್ರವಾಸಿಗರು ನಾಪತ್ತೆಯಾಗಿದ್ದಾರೆ...

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಮಹಾಭೂಕಂಪದಲ್ಲಿ ಆಸ್ಟ್ರೇಲಿಯಾದ 300 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಸ್ಟ್ರೇಲಿಯಾದಿಂದ ನೇಪಾಳಕ್ಕೆ ತೆರಳಲು 549 ಪ್ರವಾಸಿಗರು ನೋಂದಣಿ ಮಾಡಿಸಿದ್ದರು. ಅದರಲ್ಲಿ ನೇಪಾಳಕ್ಕೆ 300ಕ್ಕೂ ಹೆಚ್ಚು ಪ್ರವಾಸಿಗರು ತೆರಳಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ ಎಂದು ಆಸ್ಟ್ರೇಲಿಯಾದ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಆಸ್ಟ್ರೇಲಿಯಾ ಪ್ರವಾಸಿಗರ ಪತ್ತೆಗಾಗಿ ಆಸ್ಟ್ರೇಲಿಯಾದಿಂದ ವಿಶೇಷ ತಂಡವನ್ನು ನೇಪಾಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


