ದೇಶ

ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ: ಯೆಚೂರಿ

ಕಾಂಗ್ರೆಸ್‌ನೊಂದಿಗೆ ಸಿಪಿಎಂ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವರದಿಯನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಳ್ಳಿ...

ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ: ಯೆಚೂರಿ
ಸೀತಾರಾಂ ಯೆಚೂರಿ
Published On :

ಕೊಲ್ಕತ್ತಾ: ಕಾಂಗ್ರೆಸ್‌ನೊಂದಿಗೆ ಸಿಪಿಎಂ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವರದಿಯನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಳ್ಳಿ ಹಾಕಿದ್ದಾರೆ. ಪ್ರಧಾನಿ ಮೋದಿ ಅವರ ಹಿಂದುತ್ವ ಧೋರಣೆಯ ವಿರುದ್ಧ ಎಲ್ಲ ಪಕ್ಷಗಳು ಒಂದಾಗಿ ಹೋರಾಡಲಿವೆ. ಆದರೆ ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸೈದಾಂತಿಕ ವೈರುಧ್ಯಗಳು ಇರುವುದರಿಂದ ನಾವು ಅವರ ಜತೆ ಕೈ ಜೋಡಿಸುವುದಿಲ್ಲ ಎಂದು ಹೇಳಿದ್ದಾರೆ.

ಮೋದಿ ಅವರು ಹಿಂದುತ್ವ ಧೋರಣೆಯನ್ನಿಟ್ಟುಕೊಂಡು ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಹೋರಾಡಲು ನಮಗೆ ಎಲ್ಲ ಪಕ್ಷಗಳ ಸಹಕಾರ ಬೇಕಾಗಿದೆ ಎಂದು ಎಡಪಕ್ಷಗಳ ನಾಯಕ ಯೆಚೂರಿ ಹೇಳಿದ್ದಾರೆ.

ಮೋದಿ ಸರ್ಕಾರವು ಜನ ವಿರೋಧಿ ಹಾಗೂ ಪ್ರಗತಿಪರವಲ್ಲದ ಆರ್ಥಿಕ ನೀತಿಗಳ ಸಂಯೋಜನೆಯಾಗಿದೆ.  ಅಚ್ಛೇ ದಿನ್ ಎಂಬ  ಹೆಸರಿನ ಮೂಲಕ ದೇಶದಲ್ಲಿ ಕೋಮುವಾದ ಹುಟ್ಟಿಕೊಳ್ಳುತ್ತಿದೆ ಎಂದು ಯೆಚೂರಿ ಮೋದಿ ವಿರುದ್ಧ ಆಪಾದನೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.