ದೇಶ

ಡ್ರೋನ್ ಮೂಲಕ ದೆಹಲಿ ಮೇಲೆ ಎಲ್‌ಇಟಿ ದಾಳಿ?

ಲಷ್ಕರ್-ಇ-ತೋಯಿಬಾ(ಎಲ್‌ಇಟಿ) ಹಾಗೂ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗಳು ರಾಷ್ಟ್ರರಾಜಧಾನಿ ದೆಹಲಿಯಲ್ಲಿ...

ಡ್ರೋನ್ ಮೂಲಕ ದೆಹಲಿ ಮೇಲೆ ಎಲ್‌ಇಟಿ ದಾಳಿ?
ದೆಹಲಿ ಪೊಲೀಸ್
Published On :

ನವದೆಹಲಿ: ಲಷ್ಕರ್-ಇ-ತೋಯಿಬಾ(ಎಲ್‌ಇಟಿ) ಹಾಗೂ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗಳು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಂಗಳವಾರ ಎಚ್ಚರಿಸಿದೆ.

ಮಾನವ ರಹಿತ ಡ್ರೋನ್ ಗಳನ್ನು ಬಳಸಿ ಉಗ್ರರು ವಾಯು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಪೊಲೀಸರಿಗೆ ಮಾಹಿತಿ ನೀಡಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲು ದಹೆಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಅವರು ಎಸಿಪಿಗಳ ಸಭೆ ಕರೆದಿದ್ದಾರೆ. ಅಲ್ಲದೆ ಡ್ರೋನ್‌ಗಳ ಮಾರಾಟ ಮತ್ತು ಖರೀದಿ ಮಾಡಿದವರ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ.

ಮುಂಬಯಿ ದಾಳಿಯ ರೂವಾರಿ ಉಗ್ರ ಝಕಿ ಉರ್‌ ರೆಹಮಾನ್‌ ಲಖ್ವಿ ಪಾಕಿಸ್ಥಾನ ಜೈಲಿನಿಂದ ಬಿಡುಗಡೆಯಾಗಿರುವ ಹಿನ್ನಲೆಯಲ್ಲಿ ಇನ್ನೊಮ್ಮೆ ಭಾರೀ ದಾಳಿಗೆ ಸಂಚು ರೂಪಿಸುವ ಸಾಧ್ಯತೆಯಿರುವುದರಿಂದ ಭದ್ರತಾ ಪಡೆಗಳು ಹೈಅಲರ್ಟ್‌ ಘೋಷಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.