ದೇಶ

ಆಫ್ಘನ್ ಸ್ಥಿರತೆಗೆ ನಮ್ಮ ಬೆಂಬಲವಿದೆ: ಮೋದಿ

ಅಧಿಕಾರಕ್ಕೆ ಬಂದು ಏಳು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಆಫ್ಘನ್ ಅಧ್ಯಕ್ಷ ಅಶ್ರಫ್ ಘನಿ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ. ಮೂರು ದಿನಗಳ ಪ್ರವಾಸಕ್ಕಾಗಿ ನವದೆಹಲಿಯಲ್ಲಿರುವ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಭೇಟಿಯಾಗಿ...

ಆಫ್ಘನ್ ಸ್ಥಿರತೆಗೆ ನಮ್ಮ ಬೆಂಬಲವಿದೆ: ಮೋದಿ
ಆಫ್ಘನ್ ಅಧ್ಯಕ್ಷ ಅಶ್ರಫ್ ಘನಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ
Published On :

ನವದೆಹಲಿ: ಅಧಿಕಾರಕ್ಕೆ ಬಂದು ಏಳು ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಆಫ್ಘನ್ ಅಧ್ಯಕ್ಷ  ಅಶ್ರಫ್ ಘನಿ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ. ಮೂರು ದಿನಗಳ ಪ್ರವಾಸಕ್ಕಾಗಿ
ನವದೆಹಲಿಯಲ್ಲಿರುವ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಭೇಟಿಯಾಗಿ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಈ ವೇಳೆ ಅಫ್ಘಾನಿಸ್ತಾನದಲ್ಲಿ ಶಾಂತಿ ಮತ್ತು ಸ್ಥಿರತೆ ಸ್ಥಾಪನೆಗಾಗಿ ನಡೆಯುತ್ತಿರುವ ಪ್ರಯತ್ನಕ್ಕೆ ಭಾರತ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಭೌಗೋಳಿಕ ಸಮಸ್ಯೆ ಹಾಗೂ ರಾಜಕೀಯ ಅಡೆತಡೆಗಳ ಹೊರತಾಗಿಯೂ ಎರಡೂ ದೇಶಗಳ ನಡುವಿನ ಸಹಭಾಗಿತ್ವ ಹೆಚ್ಚುತ್ತಿದೆ. ಶಾಂತಿ ಮತ್ತು ಸಮೃದ್ಧಿಗಾಗಿ ಆಫ್ಘನ್ನರು ತೋರುತ್ತಿರುವ ದಿಟ್ಟತನಕ್ಕೆ ಭಾರತ ಮೆಚ್ಚುಗೆ ವ್ಯಕ್ತಪಡಿಸುತ್ತದೆ ಎಂದು ಮೋದಿ ಹೇಳಿದ್ದಾರೆ. ಜತೆಗೆ, ನಿಮ್ಮ ಮನೆಗಳು ಹಾಗೂ ಪಾರಂಪರಿಕ ಶ್ರೀಮಂತಿಕೆಯನ್ನು ಮರುಸೃಷ್ಟಿಸುವಾಗ ನಾವು ನಿಮ್ಮ ಜತೆಗಿರುತ್ತೇವೆ.

ಜಾಗತಿಕ ಪ್ರಾಮುಖ್ಯದ ಯೋಜನೆಗಳಲ್ಲಿ ಆಫ್ಘನ್‍ನ ಜನರೊಂದಿಗೆ ನಾವು ಹೆಗಲು ಕೊಟ್ಟು ನಡೆಯುತ್ತೇವೆ. ಆಫ್ಘನ್ ಸೇನೆಯ ಸಾಮರ್ಥ್ಯ ಹೆಚ್ಚಿಸುವ ಕ್ರಮಕ್ಕೆ ನಾವು ಬೆಂಬಲ ನೀಡಲಿದ್ದೇವೆ ಎಂದಿದ್ದಾರೆ ಮೋದಿ. ವ್ಯಾಪಾರಕ್ಕೆ ಹೆಚ್ಚಿನ ಒತ್ತು: ಉಭಯ ನಾಯಕರು ಮಾತುಕತೆ ವೇಳೆ ಸಮುದ್ರ ಹಾಗೂ ರಸ್ತೆ ಮಾರ್ಗವಾಗಿ ಎರಡೂ ದೇಶಗಳ ನಡುವೆ ವ್ಯಾಪಾರ ವಹಿವಾಟಿಗೆ ಹೆಚ್ಚಿನ ಆದ್ಯತೆ ನೀಡುವ ಕುರಿತು ಚರ್ಚೆ ನಡೆಸಿದರು. ಐಸಿಪಿ ಅಟ್ಟಾರಿಯಲ್ಲಿ ನಾವು ಆಫ್ಘನ್ ಲಾರಿಗಳನ್ನು ಎದುರುಗೊಳ್ಳಲು ಸಿದ್ಧರಿದ್ದೇವೆ ಎಂದು ಕತೆ ವೇಳೆ ಮೋದಿ ಹೇಳಿದ್ದಾರೆ. ಇದಕ್ಕಾಗಿ ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಮೋಟಾರ್ ವಾಹನಗಳ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸಲು ಎರಡೂ ದೇಶಗಳ ನಾಯಕರು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.