ದೇಶ

ಕೇರಳ ಪ್ರೊಫೆಸರ್ ಕೈ ಕತ್ತರಿಸಿದ ಪ್ರಕರಣ: 13 ದೋಷಿತರು

ಪ್ರವಾದಿ ಮೊಹಮ್ಮದ್ ಅವರನ್ನು ಅಪಮಾನಕಾರಿ ರೀತಿಯಲ್ಲಿ ಉಲ್ಲೇಖನ ಮಾಡಿದ್ದರು ಎಂಬ ಕಾರಣಕ್ಕೆ ಕೋಪಗ್ರಸ್ತರಾದ ಮುಸ್ಲಿಂ ಮೂಲಭೂತವಾದಿಗಳು ಕಾಲೇಜಿನ ಪ್ರೊಫೆಸರ್ ಟಿ.ಜೆ. ಜೋಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ...

ಕೇರಳ ಪ್ರೊಫೆಸರ್ ಕೈ ಕತ್ತರಿಸಿದ ಪ್ರಕರಣ: 13 ದೋಷಿತರು
ಕೈ ಕಳೆದುಕೊಂಡ ಪ್ರೊ.ಟಿ.ಜೆ. ಜೋಸೆಫ್
Published On :

ಕೇರಳ: ಪ್ರವಾದಿ ಮೊಹಮ್ಮದ್ ಅವರನ್ನು ಅಪಮಾನಕಾರಿ ರೀತಿಯಲ್ಲಿ ಉಲ್ಲೇಖನ ಮಾಡಿದ್ದರು ಎಂಬ ಕಾರಣಕ್ಕೆ ಕೋಪಗ್ರಸ್ತರಾದ ಮುಸ್ಲಿಂ ಮೂಲಭೂತವಾದಿಗಳು ಕಾಲೇಜಿನ ಪ್ರೊಫೆಸರ್ ಟಿ.ಜೆ. ಜೋಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಎರ್ನಾಕುಳಂ ಜಿಲ್ಲೆ ಎನ್ಐಎ ಕೋರ್ಟ್ ಗುರುವಾರ 13 ಮಂದಿ ದೋಷಿತರು ಎಂದು ತೀರ್ಪು ನೀಡಿದೆ.

ಬಿ.ಕಾಂ. ಎರಡನೇ ವರ್ಷದ ಪದವಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದ ಜೋಸೆಫ್, ದೇವರು ಮತ್ತು ಮೊಹಮ್ಮದ್ ನಡುವಿನ ಕಾಲ್ಪನಿಕ ಮಾತುಕತೆಯ ಭಾಗವೊಂದನ್ನು ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸುವಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಕೇಳಲಾಗಿತ್ತು.

ಇಲ್ಲಿ ಉಲ್ಲೇಖಿಸಿದ ಮೊಹಮ್ಮದ್ ಎಂಬುವುದನ್ನು ಪ್ರವಾದಿ ಮೊಹಮ್ಮದ್ ಎಂದೇ ಪರಿಗಣಿಸಿದ ಕೆಲವು ಮುಸ್ಲಿಂ ಮೂಲಭೂತವಾದಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು 2010ರಲ್ಲಿ ಉಪನ್ಯಾಸಕನ ಮುಂಗೈ ಕತ್ತರಿಸಿದ್ದರು.

ಪ್ರಕರಣ ಸಂಬಂಧ ತನಿಖೆಗೆ ನಡೆಸಿದ ಕೇರಳ ಅಧಿಕಾರಿಗಳು ಸೂಕ್ತ ಸಾಕ್ಷ್ಯಾಧಾರ ನೀಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ನ್ಯಾಯಾಲಯವು 18 ಮಂದಿಯನ್ನು ದೋಷಮುಕ್ತಗೊಳಿಸಿದ್ದು, 13 ಮಂದಿಯನ್ನು ದೋಷಿಗಳು ಎಂದು ತೀರ್ಪು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.