ದೇಶ

ನಕಲಿ ಪ್ರಮಾಣ ಪತ್ರ: ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಉನ್ನತ ಸ್ಥಾನದಲ್ಲಿದ್ದು ಅಧಿಕಾರದಲ್ಲಿರುವ ಕಾನೂನು ಸಚಿವ ಜಿತೇಂದರ್ ಸಿಂಗ್ ಅವರು ನಕಲಿ ಪದವಿ ಪಡೆದಿದ್ದು ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ...

ನಕಲಿ ಪ್ರಮಾಣ ಪತ್ರ: ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ದೆಹಲಿ ಕಾನೂನು ಸಚಿವ ಜಿತೇಂದರ್ ಸಿಂಗ್ ತೋಮರ್
Published On :

ನವದೆಹಲಿ: ಉನ್ನತ ಸ್ಥಾನದಲ್ಲಿದ್ದು ಅಧಿಕಾರದಲ್ಲಿರುವ ಕಾನೂನು ಸಚಿವ ಜಿತೇಂದರ್ ಸಿಂಗ್ ಅವರು ನಕಲಿ ಪದವಿ ಪಡೆದಿದ್ದು ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಕಾಂಗ್ರೆಸ್ ನ ಸಾವಿರಾರು ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇರ್ಜಿವಾಲ್ ಅವರ ನಿವಾಸದೆದುರು ಪ್ರತಿಭಟನೆಗಳಿದಿದ್ದು, ಜಿತೇಂದರ್ ಸಿಂಗ್ ಅವರು ನಕಲಿ ಪದವಿ ಪಡೆದಿದ್ದು, ಕೂಡಲೇ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ.

ಪ್ರತಿಭಟನೆ ವೇಳೆ ಕಾರ್ಯಕರ್ತರು ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಒಳಗೆ ಹೋಗಲು ಯತ್ನಿಸಿದ್ದಾರೆ. ಈ ವೇಳೆ ಕಾರ್ಯಕರ್ತರನ್ನು ನಿಯಂತ್ರಿಸುವ ಸಲುವಾಗಿ ಭದ್ರತಾ ಸಿಬ್ಬಂದಿಗಳು ಜಲಫಿರಂಗಿ ಪ್ರಯೋಗಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರತಿಭಟನೆಯ ಪ್ರಮುಖ ರುವಾರಿಯಾಗಿರುವ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಮಕೇನ್ ಮಾತನಾಡಿ, ನಕಲಿ ಜಿತೇಂದರ್ ಸಿಂಗ್ ಅವರು ಸಚಿವ ಸ್ಥಾನದಿಂದ ಕೆಳಗಿಳಿಯುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ಆಪ್ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ರಾಜಕೀಯ ರಂಗವನ್ನು ಶುದ್ಧ ಮಾಡುತ್ತೇವೆ ಎಂದು ಹೇಳಿತ್ತು. ಇದೀಗ ಇದೇ ಸರ್ಕಾರ ಅಧಿಕಾರದಲ್ಲಿದ್ದರೂ ಭ್ರಷ್ಟಚಾರವನ್ನು ನಿಯಂತ್ರಿಸದೆ, ಭ್ರಷ್ಟರನ್ನು ರಕ್ಷಿಸುತ್ತಿದೆ. ಕೂಡಲೇ ಅರವಿಂದ್ ಕೇಜ್ರಿವಾಲ್ ಅವರು ಪ್ರಕರಣ ಸಂಬಂಧ ನೈತಿಕ ಜವಾಬ್ದಾರಿ ಹೊತ್ತು, ಜಿತೇಂದರ್ ಸಿಂಗ್ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.