ಕಾಂಗ್ರೆಸ್ ಸಂಸದರ ಅಮಾನತು; ಪ್ರಜಾಪ್ರಭುತ್ವದ ಕರಾಳ ದಿನ: ಸೋನಿಯಾ ಗಾಂಧಿ
25 ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿರುವ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ನವದೆಹಲಿ: 25 ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿರುವ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇದು ಪ್ರಜಾಪ್ರಭುತ್ವದ ಕರಾಳ ದಿನ ಎಂದು ಹೇಳಿದ್ದಾರೆ.
ಅಮಾನತು ಕುರಿತಂತೆ ಪ್ರತಿಕ್ರಿಯಿಸಿರುವ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಐದು ದಿನಗಳ ಕಾಲ ಅಮಾನತುಗೊಳಿಸಿದ್ದು, ಪ್ರಜಾಪ್ರಭುತ್ವದ ಕರಾಳ ದಿನ ಎಂದು ಹೇಳಿದ್ದಾರೆ.
ವ್ಯಾಪಂ, ಲಲಿತ್ ಮೋದಿಗೆ ನೆರವು ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು 25 ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


