ಮುಂಗಾರು ಮಳೆ ಅಬ್ಬರ: ಉತ್ತರ ಭಾರತದಲ್ಲಿ 120 ಮಂದಿ ಸಾವು
ಮುಂಗಾರು ಮಳೆಯ ಅಬ್ಬರಕ್ಕೆ ಭಾರತ ಅಕ್ಷರಸಹ ತತ್ತರಿಸಿದೆ. ಉತ್ತರ ಹಾಗೂ ಈಶಾನ್ಯ ಭಾರತದ 5 ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು

ನವದೆಹಲಿ: ಮುಂಗಾರು ಮಳೆಯ ಅಬ್ಬರಕ್ಕೆ ಭಾರತ ಅಕ್ಷರಸಹ ತತ್ತರಿಸಿದೆ. ಉತ್ತರ ಹಾಗೂ ಈಶಾನ್ಯ ಭಾರತದ 5 ರಾಜ್ಯಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಕನಿಷ್ಠ 120 ಮಂದಿ ಮೃತಪಟ್ಟಿದ್ದು, ಪ್ರವಾಹದಿಂದಾಗಿ 80 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೆ ಸಿಲುಕಿದ್ದಾರೆ.
ಕಳೆದ ಕೆಲವು ದಿನಗಳಿಂದ ಬಂಗಾಳ ಕೊಲ್ಲಿಯಲ್ಲಿ ಬೀಸುತ್ತಿರುವ ಕೊಮೆನ್ ಚಂಡಮಾರುತದ ಪ್ರಭಾವದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ತಾನ, ಮಣಿಪುರ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿವೆ.
ಈ ಎಲ್ಲಾ ರಾಜ್ಯಗಳಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದಿಂದ ಲಕ್ಷಾಂತರ ಜನರು ಮನೆ, ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 17 ತಂಡಗಳು ಸಾವಿರಾರು ಜನರನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.
ಪ್ರವಾಹದಲ್ಲಿ ಸಿಲುಕಿರುವ ಸಂತ್ರಸ್ತರಿಗೆ ಹತ್ತು ಲಕ್ಷಕ್ಕೂ ಹೆಚ್ಚು ಆಹಾರ ಪೊಟ್ಟಣಗಳನ್ನು ಹೆಲಿಕಾಪ್ಟರ್ ಮೂಲಕ ವಿತರಿಸಲಾಗಿದೆ. ನಿರಾಶ್ರಿತರಿಗೆ ತಾತ್ಕಾಲಿಕ ಶಿಬಿರ ತೆರೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


