ಅಹಂಕಾರಿ ಮೋದಿ ಸರ್ಕಾರ ಕಾಂಗ್ರೆಸ್ ಮುಖ್ಯಮಂತ್ರಿಗಳನ್ನು ಕಡೆಗಣಿಸುತ್ತಿದೆ: ಸೋನಿಯಾ
ಅಹಂಕಾರ ಮೋದಿ ಸರ್ಕಾರ ಕಾಂಗ್ರೆಸ್ ನೇತೃತ್ವದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳನ್ನು ಕಡೆಗಣಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ...

ನವದೆಹಲಿ: ಅಹಂಕಾರ ಮೋದಿ ಸರ್ಕಾರ ಕಾಂಗ್ರೆಸ್ ನೇತೃತ್ವದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳನ್ನು ಕಡೆಗಣಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೋದಿ ವಿರುದ್ಧ ಗುರುವಾರ ಕಿಡಿಕಾರಿದ್ದಾರೆ.
ಉಗ್ರ ಸಂಘಟನೆಯಾದ ನಾಗಾ ಸಂಘಟನೆಯೊಂದಿಗೆ ಶಾಂತಿ ಒಪ್ಪಿಗೆ ವಿಚಾರದಲ್ಲಿ ಮೋದಿ ಸರ್ಕಾರ ಕಾಂಗ್ರೆಸ್ ನ ಮುಖ್ಯಮಂತ್ರಿಗಳನ್ನು ಕಡೆಗಣಿಸಿದ್ದು, ಒಪ್ಪಂದದ ಬಗ್ಗೆ ಯಾವೊಬ್ಬ ಮುಖ್ಯಮಂತ್ರಿಯ ಅಭಿಪ್ರಾಯವನ್ನು ಕೇಳಿಲ್ಲ. ನಾಗಾ ಒಪ್ಪಂದವೊಂದು ಐತಿಹಾಸಿಕ ಒಪ್ಪಂದವೇ ಇರಬಹುದು. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳದೇ ಇರುವುದು ಮೋದಿ ಸರ್ಕಾರದ ಸೊಕ್ಕಲ್ಲದೆ ಮತ್ತೇನು ಎಂದು ಹೇಳಿದ್ದಾರೆ.
ಯಾವುದೇ ಒಪ್ಪಂದ ಮಾಡಿಕೊಳ್ಳಬೇಕಾದರೂ ಮೋದಿ ಸರ್ಕಾರ ಪ್ರತಿಯೊಂದು ರಾಜ್ಯದ ಮುಖ್ಯಮಂತ್ರಿಯ ಅಭಿಪ್ರಾಯವನ್ನು ಪಡೆದುಕೊಳ್ಳಲಾಗಿದೆ ಎಂದು ಹೇಳುವ ಮೋದಿ ಸರ್ಕಾರ, ಈ ಒಪ್ಪಂದಲ್ಲೇಕೆ ಕಾಂಗ್ರೆಸ್ ನ ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಲಿಲ್ಲ. ಈ ಮೂಲಕ ಮೋದಿ ಸರ್ಕಾರ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿದೆ. ಕೇಂದ್ರ ಸರ್ಕಾರದ ಈ ವರ್ತನೆ ನಿಜಕ್ಕೂ ಆಶ್ಯರ್ಯಕರವಾಗಿದೆ ಎಂದು ಹೇಳಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


