ದೇಶ

ಕಾನ್ಪುರ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ

ಉತ್ತರಪ್ರದೇಶ ಕಾನ್ಪುರ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಗುರುವಾರ ನಡೆದಿದೆ...

ಕಾನ್ಪುರ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ
ಕಾನ್ಪುರ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ (ಸಾಂದರ್ಭಿಕ ಚಿತ್ರ)
Published On :

ಕಾನ್ಪುರ: ಉತ್ತರಪ್ರದೇಶ ಕಾನ್ಪುರ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಗುರುವಾರ ನಡೆದಿದೆ.

ಇಂದು ಬೆಳಿಗ್ಗೆ 6.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿರುವುದಾಗಿ ಮಾಹಿತಿ ತಿಳಿದುಬಂದಿತು. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ವಾಹನದೊಂದಿಗೆ ಸ್ಥಳಕ್ಕೆ ಭೇಟಿ ನೀಡಲಾಯಿತು. ಬೆಂಕಿಯು ನರ್ತನ ಕಂಡು ಮತ್ತೆ 5 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು. ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಯಾವುದೇ ಗಾಯಗಳಾಗಲಿ, ಪ್ರಾಣಾಪಾಯಗಳಾಗಲಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋದಾಮಿನಲ್ಲಿ ಕೆಲಸಗಾರರೆಲ್ಲರೂ ನಿದ್ದೆ ಮಾಡುತ್ತಿದ್ದೆವು. ಬೆಳಿಗ್ಗೆ 5.45ರ ಸುಮಾರು ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿ ಸ್ಫೋಟಗೊಳ್ಳುವ ಶಬ್ಧ ಕೇಳಿಸಿತು. ನಂತರ ಎಲ್ಲರೂ ಹೊರ ಓಡಿಹೋದೆವು ಎಂದು ಪ್ರತ್ಯಕ್ಷದರ್ಶಿಯೊಬ್ಬ ಹೇಳಿದ್ದಾರೆ.

ಘಟನೆಗೆ ಈ ವರೆಗೂ ಯಾವುದೇ ಕಾರಣಗಳು ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.