ಉಧಾಂಪುರ ಉಗ್ರರ ದಾಳಿ ಬಗ್ಗೆ ಗುಪ್ತಚರ ಮಾಹಿತಿ ಇರಲಿಲ್ಲ: ಬಿಎಸ್‌ಎಫ್
ಜಮ್ಮು ಮತ್ತು ಕಾಶ್ಮೀರದ ಉಧಾಂಪುರ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆಯುವ ಬಗ್ಗೆ ಗುಪ್ತಚರ ಇಲಾಖೆಯಿಂದ ಯಾವುದೇ ಮಾಹಿತಿ ಬಂದಿರಲಿಲ್ಲ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉಧಾಂಪುರ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆಯುವ ಬಗ್ಗೆ ಗುಪ್ತಚರ ಇಲಾಖೆಯಿಂದ ಯಾವುದೇ ಮಾಹಿತಿ ಬಂದಿರಲಿಲ್ಲ ಎಂದು ಗಡಿ ರಕ್ಷಣಾ ಪಡೆ(ಬಿಎಸ್‌ಎಫ್) ಗುರುವಾರ ಹೇಳಿದೆ.
'ಉಗ್ರ ದಾಳಿಯಲ್ಲಿ ನಮ್ಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ ಓರ್ವ ಯೋಧನ ಸ್ಥಿತಿ ಗಂಭೀರವಾಗಿದೆ' ಎಂದು ಬಿಎಸ್‌ಎಫ್ ಮಹಾ ನಿರ್ದೇಶಕ ಡಿ.ಕೆ.ಪಾಠಕ್ ಅವರು ಹೇಳಿದ್ದಾರೆ.
'ಉಗ್ರರು ದಾಳಿ ನಡೆಸಿದ ಬಸ್‌ನಲ್ಲಿ ಕೇವಲ ಒಬ್ಬ ಯೋಧ ಮಾತ್ರ ಶಸ್ತ್ರಸಜ್ಜಿತನಾಗಿದ್ದ. ಆತ ಒಬ್ಬನೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದ್ದಾನೆ. ಇಲ್ಲದಿದ್ದರೆ ಮತ್ತಷ್ಟು ಸಾವು ಸಂಭವಿಸುವ ಸಾಧ್ಯತೆ ಇತ್ತು' ಎಂದು ಪಾಠಕ್ ಹೇಳಿದ್ದಾರೆ.
ಕಳೆದ 20 ವರ್ಷಗಳಿಂದ ಇಲ್ಲಿ ಯಾವುದೇ ದಾಳಿಗಳು ನಡೆದಿಲ್ಲ. ಇದು ತುಂಬಾ ಸುರಕ್ಷಿತ ವಲಯ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


