ಶಾರದಾ ಹಗರಣ: ಮದನ್ ಮಿತ್ರಾ ಜಾಮೀನು ತಿರಸ್ಕರಿಸಿದ ಕೋಲ್ತತಾ ಹೈ ಕೋರ್ಟ್
ಸಾವಿರಾರು ಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಾರಿಗೆ ಹಾಗೂ ಕ್ರೀಡಾ ಸಚಿವ ಮದನ್ ಮಿತ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋಲ್ಕತಾ ಹೈ ಕೋರ್ಟ್ ಗುರುವಾರ ತಿರಸ್ಕರಿಸಿದೆ...

ನವದೆಹಲಿ: ಸಾವಿರಾರು ಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಾರಿಗೆ ಹಾಗೂ ಕ್ರೀಡಾ ಸಚಿವ ಮದನ್ ಮಿತ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋಲ್ಕತಾ ಹೈ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಮದನ್ ಮಿತ್ರಾ ಓರ್ವ ಪ್ರಭಾವಿ ವ್ಯಕ್ತಿಯಾಗಿದ್ದು, ಹಗರಣದಲ್ಲಿ ಪಾರಾಗುವ ಸಂಭವವಿದೆ. ಹೀಗಾಗಿ ಮದನ್ ಮಿತ್ರಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಬೇಕೆಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಿಬಿಐ ಅಧಿಕಾರಿಗಳ ಮನವಿಯನ್ನು ಸ್ವೀಕರಿಸಿರುವ ಕೋಲ್ಕತಾ ನ್ಯಾಯಾಲಯವು ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ್ದು, ಮದನ್ ಮಿತ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.
ಶಾರದಾ ಚಿಟ್ ಫಂಡ್ ಹಗರಣದಲ್ಲಿ ಒಳಸಂಚು, ಅಧಿಕಾರ ದುರುಪಯೋಗ, ಹಣ ಹೂಡಿಕೆ ಮುಂತಾದ ಮೇಲ್ನೋಟ ವಿಚಾರಗಳಿಗೆ ಸಂಬಂಧಿಸಿದಂತೆ ಮದನ್ ಮಿತ್ರಾ ಅವರನ್ನು 2014ರ ಡಿಸೆಂಬರ್ ತಿಂಗಳಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


