ಐಎಸ್ಐಎಸ್ ಉಗ್ರ ಸಂಘಟನೆ ಸೇರಲು ಹೊರಟಿದ್ದ ಪತ್ರಕರ್ತನ ಬಂಧನ
ಐಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ಹೊರಟಿದ್ದ ಮುಂಬೈ ಮೂಲದ ಪತ್ರಕರ್ತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ: ಐಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ಹೊರಟಿದ್ದ ಮುಂಬೈ ಮೂಲದ ಪತ್ರಕರ್ತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಂಧನಕ್ಕೊಳಗಾದ ಪತ್ರಕರ್ತ ಇಸೀಸ್ ಉಗ್ರ ಸಂಘಟನೆ ಸೇರಲು ತಯಾರಿ ನಡೆಸಿದ್ದಷ್ಟೇ ಅಲ್ಲದೇ ಫೇಸ್ ಬುಕ್ ನಲ್ಲಿ ಯಾಕೂಬ್ ಮೆಮನ್ ಬಗ್ಗೆ ಸಹಾನುಭೂತಿಯನ್ನೂ ತೋರಿಸಿ ತಾನು ಇಸೀಸ್ ಉಗ್ರ ಸಂಘಟನೆ ಸೇರುವುದಾಗಿ ತಿಳಿಸಿದ್ದ. ಈ ಹಿನ್ನೆಯಲ್ಲಿ ಪೊಲೀಸರು ಆತನಿಗಾಗಿ ಶೋಧ ಕಾರ್ಯ ನಡೆಸಿದ್ದರು.
ಪತ್ರಕರ್ತನನ್ನು ಮುಂಬೈ ನ ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಉಗ್ರ ಸಂಘಟನೆ ಸೇರಲು ಸಿದ್ಧತೆ ನಡೆಸಿದ್ದ ಪತ್ರಕರ್ತನನ್ನು ಪೊಲೀಸರು ಮಂಗಳವಾರದಂದೇ ಬಂಧಿಸಲು ತೆರಳಿದ್ದರು. ಆದರೆ ವಿಷಯ ತಿಳಿದ ಪತ್ರಕರ್ತ ಬಂಧನದಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದ. ಯಾಕೂಬ್ ಮೆಮನ್ ನನ್ನು ಗಲ್ಲಿಗೇರಿಸಿದ್ದನ್ನು ಪ್ರತಿಭಟಿಸಿದ್ದ ಪತ್ರಕರ್ತ ಅಹ್ಮದ್ ಖಾನ್ ತಾನು ಭಾರತೀಯ ಪೌರತ್ವವನ್ನು ತ್ಯಜಿಸಿ ಇಸೀಸ್ ಉಗ್ರ ಸಂಘಟನೆ ಸೇರುವುದಾಗಿ ತಿಳಿಸಿ ಫೇಸ್ ಬುಕ್ ಸ್ಟೇಟಸ್ ಹಾಕಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


