ದೇಶ

ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಪೋಸ್ಟ್ ಮಾಡುತ್ತಿದ್ದ ಯುವಕನ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಪೋಸ್ಟ್ ಮಾಡುತ್ತಿದ್ದ ಯುವಕನ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರ(ಸಾಂಕೇತಿಕ ಚಿತ್ರ)
Published On :

ಚೆನ್ನೈ: ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ತಿರುಪತಿಯ ಮೂಲದ ವ್ಯಕ್ತಿಯೊಬ್ಬ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿ ಬಂಧನಕೊಳ್ಳಗಾಗಿದ್ದ. ಇದಾದ ಕೆಲವೇ ತಿಂಗಳುಗಳಲ್ಲಿ ಇಂಥದ್ದೇ ಮತ್ತೊಂದು ಪ್ರಕರಣ ಬಯಲಾಗಿದೆ.

ಕೊಯಂಬತ್ತೂರಿನ ಪೊಲ್ಲಾಚಿ ಮೂಲದ 19 ವರ್ಷದ ಡಿಪ್ಲೊಮಾ ಮುಗಿಸಿದ್ದ ಯುವಕ ಫೇಸ್ ಬುಕ್ ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿ ಬಂಧನಕ್ಕೊಳಗಾಗಿದ್ದಾನೆ. ಎನ್.ಜಿ.ಒ ನೀಡಿದ ದೂರನ್ನು ಆಧರಿಸಿ ಈ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  ಫೇಸ್ ಬುಕ್ ಪೇಜ್ ನಿರ್ವಹಿಸುತ್ತಿದ್ದ ಮಣಿಕಂಠ ಪ್ರಭು 19 ವರ್ಷದ ಯುವಕ ಹೆಣ್ಣುಮಕ್ಕಳ ಅಶ್ಲೀಲ ಫೋಟೊಗಳನ್ನು ಪೋಸ್ಟ್ ಮಾಡುವುದಲ್ಲದೆ ಅಶ್ಲೀಲ ಕಾಮೆಂಟ್ ಗಳನ್ನೂ ಮಾಡುತ್ತಿದ್ದ. ಬಂಧನದ ನಂತರ ಈತ ನಿರ್ವಹಿಸುತ್ತಿದ್ದ ಪೇಜ್ ನ್ನು ಡಿಲೀಟ್ ಮಾಡಲಾಗಿದೆ.

ಎನ್.ಜಿ.ಒ ನೀಡಿದ್ದ ದೂರು ಆಧರಿಸಿ ಐಪಿ ಅಡ್ರೆಸ್ ನನ್ನು ಪತ್ತೆಹಚ್ಚಿರುವ ಪೊಲೀಸರು  ಈಗಷ್ಟೇ ಡಿಪ್ಲೊಮಾ ಮುಗಿಸಿ ಕೆಲಸಕ್ಕೆ ಸೇರಬೇಕಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಮೊಬೈಲ್ ಫೋನ್, ಸಿಮ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ಇಂಥದ್ದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿತ್ತು ಎಂದು ಸಿಬಿಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನ ವಿರುದ್ಧ ಐಟಿ ಕಾಯ್ದೆ ಹಾಗೂ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.