ಮೀಟರ್ ಬಡ್ಡಿ: 1,031 ಪ್ರಕರಣ, 515 ಬಂಧನ
ರೈತರ ಆತ್ಮಹತ್ಯೆಗೆ ಕಾರಣರಾಗುತ್ತಿರುವ ಖಾಸಗಿ ಲೇವಾದೇವಿದಾರರ ವಿರುದ್ಧ ಕರ್ನಾಟಕ ಸರ್ಕಾರ ಇದುವರೆಗೆ 1,031ಪ್ರಕರಣಗಳನ್ನು ದಾಖಲಿಸಿದೆ...
ನವದೆಹಲಿ: ರೈತರ ಆತ್ಮಹತ್ಯೆಗೆ ಕಾರಣರಾಗುತ್ತಿರುವ ಖಾಸಗಿ ಲೇವಾದೇವಿದಾರರ ವಿರುದ್ಧ ಕರ್ನಾಟಕ ಸರ್ಕಾರ ಇದುವರೆಗೆ 1,031ಪ್ರಕರಣಗಳನ್ನು ದಾಖಲಿಸಿದೆ. 515 ಮಂದಿಯನ್ನು ಬಂಧಿಸಿದೆ ಎಂದು ರಾಜ್ಯಸಭೆಗೆ ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಸಾಲದ ಹೊರೆ ತಾಳಲಾರದೆ 184 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವ ಮೋಹನ್ ಭಾಯ್ ಕುಂಡಾರಿ ಲಿಖಿತ ಉತ್ತರದ ಮೂಲಕ ತಿಳಿಸಿದ್ದಾರೆ. ಜುಲೈ ತಿಂಗಳಲ್ಲಿ ಅತಿ ಹೆಚ್ಚು ಅಂದರೆ 152 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನಲ್ಲಿ 20 ಮತ್ತು ಮೇನಲ್ಲಿ 12 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆಗೆ ಸಾಲದ ಹೊರೆಯೇ ಕಾರಣ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ಲೇವಾ ದೇವಿಗಾರ ನಿಯಂತ್ರಣ, ಬೆಂಬಲ ಬೆಲೆ, ಸಾಲ ಮನ್ನಾ ಸೇರಿದಂತೆ ರೈತರ ಆತ್ಮಹತ್ಯೆ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.
ಆತ್ಮಹತ್ಯೆ ಹಾದಿ ಹಿಡಿದಿರುವ ಕರ್ನಾಟಕದ ನೆರವಿಗೆ ಕೇಂದ್ರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಸಚಿವರು ರೈತರ ಕೃಷಿ ಉತ್ಪಾದನೆ ಹೆಚ್ಚಳ, ಮಾರುಕಟ್ಟೆ ವ್ಯವಸ್ಥೆ, ಸಾಲದ ಪ್ರಮಾಣ ಹೆಚ್ಚಳದಂತಹ ಸಮಗ್ರ ಸ್ವರೂಪದ ಮಧ್ಯಪ್ರವೇಶದಿಂದ ಇಂತಹ ಪರಿಸ್ಥಿತಿ ನಿಭಾಯಿಸಲು ಸಾಧ್ಯ ಎಂದು ಸರ್ಕಾರ ಭಾವಿಸಿದೆ. ಕೃಷಿ ಮತ್ತು ಕೃಷಿ ಸಾಲ ರಾದ್ಯದ ವಿಷಯಗಳು, ಕೃಷಿ ವಲಯದ ಅಭಿವೃದ್ಧಿಗೆ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಕರ್ನಾ ಟಕ ಸರ್ಕಾರ ಜಿಲ್ಲೆ ಮತ್ತು ಉಪ ವಿಭಾಗ ಮಟ್ಟದಲ್ಲಿ ಸಮಿತಿ ರಚಿಸಿ ಕರ್ನಾಟಕ ಮನಿ ಲಾಂಡರಿಂಗ್ ಆ್ಯಕ್ಟ್, ಚಿಟ್ ಫಂಡ್ ಆ್ಯಕ್ಟ್ ಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದು, 515 ಜನರನ್ನು ಬಂಧಿಸಿದೆ ಎಂದು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

