ಬೆಲೆ ಇಳಿಕೆ ವಿರೋಧಿಸಿ ಜಲಂಧರ್ ರೈತರಿಂದ ಉಚಿತವಾಗಿ ಆಲೂಗಡ್ಡೆ ಹಂಚಿಕೆ
ಪಂಜಾಬ್ ನ ಜಲಂಧರ್ ನ ರೈತರು ತಾವು ಬೆಳೆದ ಬೆಳೆಯನ್ನು ಜನರಿಗೆ ಉಚಿತವಾಗಿ ಹಂಚುತ್ತಿದ್ದಾರೆ.

ಜಲಂಧರ್: ಬೆಳೆ ನಷ್ಟವಾಗಿ, ಸಾಲದ ಹೊರೆ ಎದುರಿಸುತ್ತಿರುವ ಕರ್ನಾಟಕದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ. ಪಂಜಾಬ್ ನ ಜಲಂಧರ್ ನ ರೈತರು ತಾವು ಬೆಳೆದ ಬೆಳೆಯನ್ನು ಜನರಿಗೆ ಉಚಿತವಾಗಿ ಹಂಚುತ್ತಿದ್ದಾರೆ.
ಸೂಕ್ತ ಬೆಲೆ ಸಿಗದ ಕಾರಣ ಆಕ್ರೋಶಗೊಂಡಿರುವ ರೈತರು ತಾವು ಬೆಳೆದಿದ್ದ ಆಲೂಗಡ್ಡೆಯನ್ನು ಉಚಿತವಾಗಿ ಹಂಚುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಆಲೂಗಡ್ಡೆ ದರ ಕುಸಿತಕಂಡಿದ್ದು ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇದ್ದರೆ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸುವುದಾಗಿ ಆಲೂಗಡ್ಡೆ ಬೆಳೆಗಾರರು ಎಚ್ಚರಿಕೆ ನೀಡಿದ್ದಾರೆ.
ಪ್ರತಿ ಎಕರೆಗೆ ಉತ್ಪಾದನಾ ವೆಚ್ಚ 50, 000 - 60, 000 ರಷ್ಟಾಗುತ್ತದೆ, ಆದರೆ ನಮ್ಮ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆಯೇ ಇಲ್ಲದಂತಾಗಿದೆ ಎಂದು ಜಲಂಧರ್ ಆಲೂಗಡ್ಡೆ ಬೆಳೆಗಾರರ ಸಂಘದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ನಮ್ಮ ಬೆಳೆಯನ್ನು ರಫ್ತು ಮಾಡುವುದಕ್ಕೆ ಕ್ರಮ ಕೈಗೊಳ್ಳಬೇಕು, ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


