ದೇಶ

ವ್ಯಾಪಂ ಹಗರಣ: ಸಾಯಲು ಅನುಮತಿ ಕೋರಿ ರಾಷ್ಟ್ರಪತಿಗಳಿಗೆ ಪತ್ರ

ವ್ಯಾಪಂ ಹಗರಣ ಸಂಬಂಧ ಜೈಲು ಸೇರಿರುವ 70 ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಅನುಮತಿ ನೀಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ...

ವ್ಯಾಪಂ ಹಗರಣ: ಸಾಯಲು ಅನುಮತಿ ಕೋರಿ ರಾಷ್ಟ್ರಪತಿಗಳಿಗೆ ಪತ್ರ
ವ್ಯಾಪಂ
Published On :

ಭೋಪಾಲ್: ವ್ಯಾಪಂ ಹಗರಣ ಸಂಬಂಧ ಜೈಲು ಸೇರಿರುವ 70 ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಅನುಮತಿ ನೀಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಗ್ವಾಲಿಯರ್‌ ಕೇಂದ್ರ ಕಾರಾಗೃಹದಲ್ಲಿರುವ ತಮ್ಮ ಭವಿಷ್ಯ ಕತ್ತಲಾಗಿದೆ. ನ್ಯಾಯಾಂಗದ ತಾರತಮ್ಯದಿಂದ ಸಂಕಷ್ಟಕ್ಕೆ ಈಡಾಗಿದ್ದೇವೆ ಎಂದು ಪತ್ರದಲ್ಲಿ ಹಗರಣದ ಆರೋಪಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರದ ಪ್ರತಿಯನ್ನು ಪ್ರಧಾನಿ ಕಚೇರಿ, ಮುಖ್ಯ ನ್ಯಾಯಮೂರ್ತಿ, ಮಧ್ಯಪ್ರದೇಶ ಹೈಕೋರ್ಟ್‌, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಕೇಂದ್ರ ಗೃಹ ಸಚಿವರ ಸೇರಿದಂತೆ ದೇಶದ ಗಣ್ಯರಿಗೆ ಕಳುಹಿಸಿದ್ದಾರೆ. ಪ್ರಕರಣದ ವಿಚಾರಣೆ ವೇಳೆ ಆರೋಪಿಗಳು ನ್ಯಾಯಾಲಯದಲ್ಲೇ ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

'ಭಾರತೀಯ ದಂಡ ಸಂಹಿತೆಯಡಿ ಒಂದೇ ರೀತಿಯ ಆರೋಪಗಳನ್ನು ಎದುರಿಸುತ್ತಿರುವ ವ್ಯಾಪಂ ಹಗರಣದ ಹಲವು ಆರೋಪಿಗಳಿಗೆ ಜಬಲ್‌ಪುರ ಹಾಗೂ ಭೋಪಾಲದ ನಾನಾ ನ್ಯಾಯಾಲಯಗಳು ಜಾಮೀನು ನೀಡಿವೆ. ಆದರೆ, ನಾವು ಜೈಲಿನಲ್ಲಿ ಕೊಳೆಯುತ್ತಿದ್ದೇವೆ,' ಎಂದು ಪತ್ರದಲ್ಲಿ ಹೇಳಿದ್ದಾರೆ.

'ಬಹಳ ದಿನಗಳಿಂದ ನಾವು ಜೈಲಿನಲ್ಲಿದ್ದೇವೆ. ನಮ್ಮಕುಟುಂಬಗಳು ಸಂಕಷ್ಟದಲ್ಲಿವೆ. ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಇದರಿಂದ ನಮ್ಮ ಮಾನಸಿಕ ಸ್ಥಿತಿ ಹದಗೆಟ್ಟಿದೆ, ಆತ್ಮಹತ್ಯೆ ಮಾಡಿಕೊಳ್ಳುವ ನಕಾರಾತ್ಮಕ ಚಿಂತನೆ ಮೂಡಿದೆ,' ಎಂದು ಪತ್ರದಲ್ಲಿ ವಿವರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.