ದೇಶ

ಎಲ್‌ಎಲ್‌ಎಂ ಪರೀಕ್ಷೆಯಲ್ಲಿ ಪೊಲೀಸ್ ಮಹಾನಿರ್ದೇಶಕನಿಂದ ನಕಲು

ತ್ರಿಸೂರ್ ಪೊಲೀಸ್ ಮಹಾನಿರ್ದೇಶಕ ಟಿ.ಜೆ. ಜೋಸ್ ಅವರು ಕಳೆದ ಮೇ ತಿಂಗಳಲ್ಲಿ ನಡೆದ ಎಲ್‌ಎಲ್‌ಎಂ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ್ದಾರೆ ಎಂದು...

ಎಲ್‌ಎಲ್‌ಎಂ ಪರೀಕ್ಷೆಯಲ್ಲಿ ಪೊಲೀಸ್ ಮಹಾನಿರ್ದೇಶಕನಿಂದ ನಕಲು
ಟಿ.ಜೆ. ಜೋಸ್
Published On :

ಕೊಟ್ಟಾಯಂ: ತ್ರಿಸೂರ್ ಪೊಲೀಸ್ ಮಹಾನಿರ್ದೇಶಕ ಟಿ.ಜೆ. ಜೋಸ್ ಅವರು ಕಳೆದ ಮೇ ತಿಂಗಳಲ್ಲಿ ನಡೆದ ಎಲ್‌ಎಲ್‌ಎಂ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ್ದಾರೆ ಎಂದು ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪ ಸಮಿತಿ ಹೇಳಿದೆ.

ಈ ಸಂಬಂಧ ಏಳು ಸದಸ್ಯರನ್ನೊಳಗೊಂಡ ಉಪ ಸಮಿತಿ ಇಂದು ಮಹಾತ್ಮ ಗಾಂಧಿ ವಿವಿ ಕುಲಪತಿ ಶೀನ ಶುಕೂರ್ ಅವರಿಗೆ ವರದಿ ಸಲ್ಲಿಸಿದೆ.

'ಪರೀಕ್ಷಾ ಮೇಲ್ವಿಚಾರಕರ ಮತ್ತು ಕೊಠಡಿಯಲ್ಲಿ ಹಾಜರಿದ್ದ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ವರದಿ ಸಿದ್ಧಪಡಿಸಲಾಗಿದ್ದು, ಪೊಲೀಸ್ ಮಹಾನಿರ್ದೇಶಕರು ನಕಲು ಮಾಡಿರುವುದು ತನಿಖೆಯಿಂದ ಬಹಿರಂಗವಾಗಿದೆ' ಎಂದು ಸಮಿತಿಯ ಸದಸ್ಯರೊಬ್ಬರು ವರದಿ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉಪ ಸಮಿತಿ ನೀಡಿರುವ ವರದಿಯನ್ನು ಆಧರಿಸಿ ಸಿಂಡಿಕೇಟ್ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದಕೊಳ್ಳಲಾಗುವುದು ಎಂದು ವಿವಿ ಮೂಲಗಳು ತಿಳಿಸಿವೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಟಿ.ಜೆ.ಜೋಸ್ ಅವರನ್ನು ದೀರ್ಘಕಾಲ ರಜೆಯ ಮೇಲೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.