ದೇಶ

ಕೇಂದ್ರ ಸರ್ಕಾರದಿಂದ ನಾಗ್ಪುರದಲ್ಲಿ ಎನ್ ಡಿ ಆರ್ ಎಫ್ ಅಕಾಡೆಮಿ ಸ್ಥಾಪನೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ(ಎನ್.ಡಿ.ಆರ್.ಎಫ್) ನ ಅಕಾಡೆಮಿಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಕೇಂದ್ರ ಸರ್ಕಾರದಿಂದ ನಾಗ್ಪುರದಲ್ಲಿ ಎನ್ ಡಿ ಆರ್ ಎಫ್ ಅಕಾಡೆಮಿ ಸ್ಥಾಪನೆ
ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ(ಎನ್.ಡಿ.ಆರ್.ಎಫ್)
Published On :

ನವದೆಹಲಿ: ಮಹಾರಾಷ್ಟ್ರದ ನಾಗ್ಪುರದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ(ಎನ್.ಡಿ.ಆರ್.ಎಫ್) ನ ಅಕಾಡೆಮಿಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಪ್ರಸ್ತುತ ಇರುವ ರಾಷ್ಟ್ರೀಯ ಫೈರ್ ಸರ್ವಿಸ್ ಕಾಲೇಜು ಮತ್ತು ರಾಷ್ಟ್ರೀಯ ನಾಗರಿಕ ರಕ್ಷಣಾ ಕಾಲೇಜನ್ನು ಎನ್.ಡಿ.ಆರ್.ಎಫ್ ಅಕಾಡೆಮಿಯೊಂದಿಗೆ ವಿಲೀನಗೊಳಿಸಲಾಗುತ್ತದೆ.
ಎನ್.ಡಿ.ಆರ್.ಎಫ್ ಅಕಾಡೆಮಿಯೊಂದಿಗೆ ಈ ಕಾಲೇಜುಗಳನ್ನು ವಿಲೀನಗೊಳಿಸುವುದರಿಂದ ವಿಪತ್ತು ನಿರ್ವಹಣಾ ಸಿಬ್ಬಂದಿಗಳಿಗೆ ಸಿಬ್ಬಂದಿಗೆ ವಿಶೇಷ ತರಬೇತಿ ನೀದುವುದರ ಜೊತೆಗೆ ಅಗ್ನಿಶಾಮಕ ಸೇವೆ, ನಾಗರಿಕ ರಕ್ಷಣೆ, ವಿಪತ್ತು ನಿರ್ವಹಣಾ ತಂಡಗಳ ನಡುವೆ ಉತ್ತಮ ಸಮನ್ವಯತೆ ಸಾಧಿಸಲು ನೆರವಾಗಲಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ರಾಜ್ಯಸಭೆಗೆ ತಿಳಿಸಿದ್ದಾರೆ.
ದೇಶದಲ್ಲಿ ವಿಪತ್ತು ಎದುರಾದಾಗ ಕಾರ್ಯಾಚರಣೆಗೆ ವಿಮಾನಗಳನ್ನು ರಕ್ಷಣಾ ಇಲಾಖೆಯಿಂದ ಪಡೆಯಲಾಗುತ್ತದೆ ಎಂದು ಕಿರಣ್ ರಿಜಿಜು ರಾಜ್ಯಸಭೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.