ದೇಶ

ಉಗ್ರ ನಾವೇದ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪಾಕಿಸ್ತಾನಕ್ಕೆ ಪತ್ರ ಬರೆಯಲು ಎನ್ಐಎ ಸಿದ್ಧತೆ

ಜಮ್ಮು-ಕಾಶ್ಮೀರದಲ್ಲಿ ಬಂಧಿಸಲಾಗಿದ್ದ ಉಗ್ರ ಮೊಹಮದ್ ನಾವೇದ್ ನ ಭಾರತ ವಿರೋಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು ಎನ್ಐಎ ಪಾಕಿಸ್ತಾನಕ್ಕೆ ಪತ್ರ ಬರೆಯಲು ಸಿದ್ಧತೆ ನಡೆಸಿದೆ.

ಉಗ್ರ ನಾವೇದ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪಾಕಿಸ್ತಾನಕ್ಕೆ ಪತ್ರ ಬರೆಯಲು ಎನ್ಐಎ ಸಿದ್ಧತೆ
ಮೊಹಮದ್ ನಾವೇದ್
Published On :

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಬಂಧಿಸಲಾಗಿದ್ದ ಉಗ್ರ ಮೊಹಮದ್ ನಾವೇದ್ ನ ಭಾರತ ವಿರೋಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು ಎನ್ಐಎ ಪಾಕಿಸ್ತಾನಕ್ಕೆ ಪತ್ರ ಬರೆಯಲು ಸಿದ್ಧತೆ ನಡೆಸಿದೆ.

ಉಧಮ್‌ಪುರದಲ್ಲಿ ನಡೆದ ದಾಳಿ ನಂತರ ಸೆರೆ ಸಿಕ್ಕ ಮೊಹಮದ್ ನಾವೇದ್ ಪಾಕಿಸ್ತಾನ ಮೂಲದವನಾಗಿದ್ದು ಆತನ ಭಾರತ ವಿರೋಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಬೇಕೆಂದು ಎನ್ಐಎ ಪಾಕಿಸ್ತಾನಕ್ಕೆ ಒತ್ತಾಯಿಸುವ ಸಾಧ್ಯತೆ ಇದೆ. ಪ್ರಸ್ತುತ ಭಯೋತ್ಪಾದನಾ ನಿಗ್ರಹ ದಳದ ವಶದಲ್ಲಿರುವ ಭಯೋತ್ಪಾದಕ ತನ್ನ ಚಟುವಟಿಕೆಗಳ ಬಗ್ಗೆ ನಿರಂತರವಾಗಿ ಹೇಳಿಕೆಗಳನ್ನು ಬದಲಿಸುತ್ತಿದ್ದು, ಮಂಪರು ಪರೀಕ್ಷೆಗೆ ಅನುಮತಿ ನೀಡಬೇಕೆಂದು ಕೋರ್ಟ್ ಗೆ ಎನ್ಐಎ ಮನವಿ ಸಲ್ಲಿಸಲಿದೆ.

ಬಿ.ಎಸ್.ಎಫ್ ನಿಂದ ಬಂಧಿತ ಭಯೋತ್ಪಾದಕನನ್ನು 14 ದಿನಗಳ ಕಾಲ ಭಯೋತ್ಪಾದನಾ ನಿಗ್ರಹ ಸಂಸ್ಥೆ ವಶಕ್ಕೆ ಒಪ್ಪಿಸಿ ಜಮ್ಮು-ಕಾಶ್ಮೀರದ ವಿಶೇಶ ನ್ಯಾಯಾಲಯ ಆದೇಶ ಹೊರಡಿಸಿತ್ತು. ಒಂದು ವಾರ ನಿರಂತರ ವಿಚಾರಣೆ ನಡೆಸಿರುವ ಎನ್ಐಎ ಮೊಹಮದ್ ನಾವೇದ್ ವಿರುದ್ಧ ಹಲವು ಐಪಿಸಿ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿದೆ.

ಬಂಧಿತ ಉಗ್ರ ನಾವೇದ್, ಲಷ್ಕರ್-ಎ- ತಯ್ಬಾ ಉಗ್ರ ಸಂಘಟನೆಯಿಂದ ತರಬೇತಿ ಪಡೆದಿದ್ದು ಅಮರನಾಥ್ ಯಾತ್ರೆ ಮೇಲೆ ದಾಳಿ ನಡೆಸಲು ಬಂದಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.