ದೇಶ

ಯಾವುದೇ ಸಮನ್ಸ್ ಬಂದಿಲ್ಲ, ರಾಹುಲ್ ಭೇಟಿಯೂ ಮಾಡಿಲ್ಲ: ಲಲಿತ್ ಮೋದಿ

ಅಕ್ರಮ ಹಣ ವರ್ಗಾವಣೆ ಆರೋಪವನ್ನು ತಳ್ಳಿಹಾಕಿರುವ ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ, ಈ ಸಂಬಂಧ ಜಾರಿ ನಿರ್ದೇಶನಾಲಯದಿಂದ ನನಗೆ ಯಾವುದೇ...

ಯಾವುದೇ ಸಮನ್ಸ್ ಬಂದಿಲ್ಲ, ರಾಹುಲ್ ಭೇಟಿಯೂ ಮಾಡಿಲ್ಲ: ಲಲಿತ್ ಮೋದಿ
ಲಲಿತ್ ಮೋದಿ
Published On :

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪವನ್ನು ತಳ್ಳಿಹಾಕಿರುವ ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ, ಈ ಸಂಬಂಧ ಜಾರಿ ನಿರ್ದೇಶನಾಲಯದಿಂದ ನನಗೆ ಯಾವುದೇ ಸಮನ್ಸ್ ಬಂದಿಲ್ಲ ಎಂದು ಹೇಳಿದ್ದಾರೆ.

ಇಂಡಿಯಾ ಟುಡೇ ಟಿವಿಗೆ ನೀಡಿದ ಸಂದರ್ಶನದಲ್ಲಿ ಉಲ್ಟಾ ಹೊಡೆದಿರುವ ಲಲಿತ್ ಮೋದಿ, ತಾನು ರಾಹುಲ್ ಗಾಂಧಿಯನ್ನಾಗಲಿ ಅಥವಾ ಪ್ರಿಯಾಂಕಾ ವಾದ್ರಾ ಅವರನ್ನಾಗಲಿ ಭೇಟಿ ಮಾಡಿಯೇ ಇಲ್ಲ ಎಂದಿದ್ದಾರೆ. ಆದರೆ ಕಳೆದ ಜುಲೈನಲ್ಲಿ, ತಾನು ಐಪಿಎಲ್ ಮುಖ್ಯಸ್ಥನಾಗಿದ್ದಾಗ ರಾಹುಲ್ ಗಾಂಧಿ ಮತ್ತು ರಾಬರ್ಟ್ ವಾದ್ರಾ ಅವರನ್ನು ಭೇಟಿ ಮಾಡಿದ್ದೇ ಎಂದು ಟ್ವೀಟ್ ಮಾಡಿದ್ದರು.

ಇನ್ನು ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವ ಹಾಗೂ ಇಂಟರ್‌ಪೊಲ್ ರೆಡ್ ಕಾರ್ನರ್ ನೋಟಿಸ್‌ಗೆ ಮನವಿ ಮಾಡಿರುವ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಲಲಿತ್ ಮೋದಿ, ನನಗೆ ಇದುವರೆಗೂ ಯಾವುದೇ ಸಮನ್ಸ್ ಬಂದಿಲ್ಲ ಎಂದಿದ್ದಾರೆ.

'ನನಗೆ ಇಂಟರ್‌ಪೊಲ್‌ನಿಂದ ಒಂದು ಪತ್ರ ಬಂದಿದೆ. ಆದರೆ ನನ್ನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿಲ್ಲ ಮತ್ತು ನನ್ನ ಪ್ರಕರಣದ ವಿಚಾರಣೆಗೆ ನಾನು ಹಾಜರಾಗುತ್ತೇನೆ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.