ರಾಧೆ ಮಾ ಜಾಮೀನು ಅರ್ಜಿ ವಜಾ, ದೇವ ಮಹಿಳೆಗೆ ಬಂಧನ ಭೀತಿ
ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ವಿವಾದಿತ ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾಗೆ ನಿರೀಕ್ಷಣಾ ಜಾಮೀನು....

ಮುಂಬೈ: ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ವಿವಾದಿತ ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾಗೆ ನಿರೀಕ್ಷಣಾ ಜಾಮೀನು ನೀಡಲು ಮುಂಬೈ ಕೋರ್ಟ್ ನಿರಾಕರಿಸಿದೆ.
ಬಂಧನ ಭೀತಿಯಲ್ಲಿರುವ ರಾಧೆ ಮಾ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ.
50 ವರ್ಷದ ರಾಧೆ ಮಾ ವಿರುದ್ಧ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದರು. ದೇವ ಮಹಿಳೆ ಸೂಚನೆ ಮೇರೆಗೆ ನನ್ನ ಗಂಡನ ಮನೆಯವರು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರಲ್ಲದೇ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದೀಗ ನನ್ನ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ನನ್ನ ಪೋಷಕರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಇದರಲ್ಲಿ ರಾಧೆ ಮಾ ಅವರ ಕೈ ವಾಡಿ ಇದೆ ಎಂದು ಬೊರಿವಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಸಂಬಂಧ ಪೊಲೀಸರು ಈಗಾಗಲೇ ರಾಧೆ ಮಾಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


