ರಾಹುಲ್ ಗಾಂಧಿ 'ಟೊಳ್ಳು ಪ್ರದರ್ಶಕ': ಅನುರಾಗ್ ಠಾಕೂರ್
ಭಾರತೀಯ ಚಲನಚಿತ್ರ ಮತ್ತು ಕಿರುತೆರೆ ಸಂಸ್ಥೆಯ(ಎಫ್ ಟಿಐಐ) ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್...

ನವದೆಹಲಿ: ಭಾರತೀಯ ಚಲನಚಿತ್ರ ಮತ್ತು ಕಿರುತೆರೆ ಸಂಸ್ಥೆಯ(ಎಫ್ ಟಿಐಐ) ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಹಾಗೂ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀರ್ವ ವಾಗ್ದಾಳಿ ನಡೆಸಿದ್ದು, ಅವರನ್ನು ಟೊಳ್ಳು ಪ್ರದರ್ಶಕ ಎಂದು ಕರೆದಿದ್ದಾರೆ.
ಸಂಸತ್ತು ಅಧಿವೇಶನ ನಡೆಯುವಾಗ ರಾಹುಲ್ ಗಾಂಧಿ ಅವರು ಬೀದಿಗಳಲ್ಲಿ ಓಡಾಡುತ್ತಿರುತ್ತಾರೆ. ಬೀದಿಗಳಲ್ಲಿ ಓಡಾಡುವ ಸಂದರ್ಭ ಬಂದಾಗ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ. ಇದುವರೆಗೆ ಅವರನ್ನು ಯಾರಿಂದಲೂ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಅವರ ಭಾಷಣದಲ್ಲಿ ಯಾವುದೇ ಸತ್ಯಾಂಶ ಅಥವಾ ತಾರ್ಕಿಕ ಅಂಶ ಇರುವುದಿಲ್ಲ ಎಂದು ಅನುರಾಗ್ ಠಾಕೂರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಧಿಗಳು ಅವರ ಭವಿಷ್ಯದ ಬಗ್ಗೆ ಯೋಚಿಸಬೇಕು. ತಮ್ಮ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದಿರುವ ಟೊಳ್ಳು ಪ್ರದರ್ಶಕನಿಂದ ವಿದ್ಯಾರ್ಥಿಗಳು ಏನನ್ನು ಕಲಿಯಲು ಸಾಧ್ಯ? ಅಂತಹ ಕಳೆಹೀನ ರಾಜಕಾರಣಿಯಿಂದ ಸಹಾಯ ಪಡೆಯದಿರುವುದು ಉತ್ತಮ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಗಾಂಧಿ ಮನೆತನವನ್ನು ಬಿಟ್ಟು ಹೊರಗಿನವರನ್ನು ನಾಯಕನ ಸ್ಥಾನಕ್ಕೆ ತಂದು ಕೂರಿಸಬೇಕು ಎಂದು ಅನುರಾಗ್ ಠಾಕೂರ್ ಹೇಳಿದರು.ಇಂದು ಬೆಳಗ್ಗೆ ಎಫ್ ಟಿಐಐ ವಿವಾದ ಕುರಿತು ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, ಭಾರತದಲ್ಲಿ ಕಳೆದ 5 ದಶಕಗಳಿಂದ ಶ್ರೇಣಿ ಆಧಾರದ ಮೇಲೆ ಬೆಳೆದುಬಂದಿರುವ ಪ್ರತಿಯೊಂದು ಸಂಸ್ಥೆಯೂ ಈಗ ನಾಶವಾಗುತ್ತಿವೆ ಎಂದು ಆಪಾದಿಸಿದ್ದರು.
ಪುಣೆಯಲ್ಲಿರುವ ಎಫ್ ಟಿಟಿಐಯ ಮುಖ್ಯಸ್ಥರಾಗಿ ಗಜೇಂದ್ರ ಚೌಹಾಣ್ ಅವರನ್ನು ನೇಮಿಸಿರುವುದನ್ನು ವಿರೋಧಿಸಿ ಸುಮಾರು 200 ಮಂದಿ ವಿದ್ಯಾರ್ಥಿಗಳು ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಲ್ಲಿಗೆ ರಾಹುಲ್ ಗಾಂಧಿ ಜುಲೈ 31ರಂದು ಭೇಟಿ ಮಾಡಿ, ರಾಷ್ಟ್ರೀಯ ಸಂಸ್ಥೆಗಳಲ್ಲಿ ಕಳಪೆ ಗುಣಮಟ್ಟ ಕಂಡುಬರಲು ಆರ್ ಎಸ್ ಎಸ್ ಕಾರಣ ಎಂದು ಆರೋಪಿಸಿದ್ದರು. ಅಲ್ಲಿಂದ ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


