ಜಂತರ್ ಮಂತರ್ ನಿಂದ ಪ್ರತಿಭಟನಾ ನಿರತ ನಿವೃತ್ತ ಸೇನಾ ಸಿಬ್ಬಂದಿಗಳ ತೆರವು
ಒನ್ ರ್ಯಾಂಕ್ ಒನ್ ಪೆನ್ಷನ್ ಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಮಾಜಿ ಸೇನಾ ಸಿಬ್ಬಂದಿಗಳನ್ನು ಪೊಲೀಸರು ಜಂತರ್ ಮಂತರ್ ನಿಂದ ತೆರವುಗೊಳಿಸಿದ್ದಾರೆ.

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್ ಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ನಿವೃತ್ತ ಸೇನಾ ಸಿಬ್ಬಂದಿಗಳನ್ನು ಪೊಲೀಸರು ಜಂತರ್ ಮಂತರ್ ನಿಂದ ತೆರವುಗೊಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಭದ್ರತಾ ದೃಷ್ಟಿಯಿಂದ ಜಂತರ್ ಮಂತರ್ ನಿಂದ ಪ್ರತಿಭಟನಾ ನಿರತರನ್ನು ತೆರವುಗೊಳಿಸಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ವಿಜಯ್ ಸಿಂಗ್ ತಿಳಿಸಿದ್ದಾರೆ.
ತೆರವುಗೊಳಿಸಿರುವ ಕ್ರಮವನ್ನು ವಿರೋಧಿಸಿರುವ ಪ್ರತಿಭಟನಾ ನಿರತರು, ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅಗತ್ಯವಿರುವ ಅನುಮತಿ ತಮ್ಮ ಬಳಿ ಇದೆ ಎಂದು ಹೇಳಿದ್ದಾರೆ. ಪೂರ್ವಾನುಮತಿ ಪಡೆದು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ತೆರವುಗೊಳಿಸಿದ್ದಾರೆ ಎಂದು ಸೇನಾ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒನ್ ರ್ಯಾಂಕ್ ಒನ್ ಪೆನ್ಷನ್ ಗಾಗಿ ಆಗಸ್ಟ್ 15 ರಂದು ಅಂತಿಮ ಹಂತದ ಪ್ರತಿಭಟನೆ ನಡೆಸಲಿದ್ದೇವೆ, ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ ಜಾರಿಗೊಳಿಸುವ ನಿರೀಕ್ಷೆ ಇದೆ ಎಂದು ನಿವೃತ್ತ ಸೇನಾ ಸಿಬ್ಬಂದಿ ಅನಿಲ್ ಕುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯೋಜನೆ ಜಾರಿ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿ ಈಗಾಗಲೇ ನಾಲ್ವರು ನಿವೃತ್ತ ಸೇನಾ ಮುಖ್ಯಸ್ಥರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


