ಕಾಶ್ಮೀರಿ ಜನತೆಯ ಸ್ವಾತಂತ್ರ್ಯಕ್ಕೆ ಸಹಾಯ ಮಾಡಲು ಪಾಕಿಸ್ತಾನ ಸಿದ್ಧ: ಅಬ್ದುಲ್ ಬಸಿತ್
ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಕಾಶ್ಮೀರದ ಜನತೆಗೆ ಪಾಕಿಸ್ತಾನ ಎಂದಿಗೂ ಸಹಾಯ ಮಾಡಲಿದೆ: ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್

ನವದೆಹಲಿ: ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಕಾಶ್ಮೀರದ ಜನತೆಗೆ ಪಾಕಿಸ್ತಾನ ಎಂದಿಗೂ ಸಹಾಯ ಮಾಡಲಿದೆ ಎಂದು ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ ಭರವಸೆ ನೀಡಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಪಾಕಿಸ್ತಾನ ಧ್ವಜಾರೋಹಣ ಮಾಡಿ ಮಾತನಾಡಿರುವ ಅಬ್ದುಲ್ ಬಸಿತ್, ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಯತ್ನಿಸಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿವಾದವನ್ನು ಹೊರತುಪಡಿಸಿ ಭಾರತದೊಂದಿಗೆ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿರುವ ಅಬ್ದುಲ್ ಬಸಿತ್, ಕಾಶ್ಮೀರಿ ಜನತೆಗೆ ಸ್ವಾತಂತ್ರ್ಯ ಸಿಗುವವರೆಗೂ ಪಾಕಿಸ್ತಾನ ವಿರಮಿಸುವುದಿಲ್ಲ ಎಂದು ಅಬ್ದುಲ್ ಬಸಿತ್ ತಿಳಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟ ಯಶಸ್ವಿಯಾಗುವುದಕ್ಕೆ ಕೆಲವು ವರ್ಷಗಳು ಬೇಕಾಗುತ್ತವೆ. ಕೆಲವೊಮ್ಮೆ ದಶಕಗಳಾದರೂ ಆಗಬಹುದು. ಆದರೆ ಪಾಕಿಸ್ತಾನ ಮಾತ್ರ ಕಾಶ್ಮೀರಿ ಜನರ ಬೆಂಬಲಕ್ಕೆ ನಿಲ್ಲಲಿದೆ ಎಂದು ಬಸಿತ್ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


