ಪೊಲೀಸರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ: ನಿವೃತ್ತ ಯೋಧರು
ಒನ್ ರ್ಯಾಂಕ್ ಒನ್ ಪೆನ್ಷನ್‌ಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಿವೃತ್ತ ಯೋಧರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು...

ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್‌ಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಿವೃತ್ತ ಯೋಧರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಪ್ರತಿಭಟನಾನಿರತ ನಿವೃತ್ತ ಸೇನಾ ಸಿಬ್ಬಂದಿ ಆರೋಪಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಭದ್ರತಾ ದೃಷ್ಟಿಯಿಂದ ಜಂತರ್ ಮಂತರ್ ನಿಂದ ಪ್ರತಿಭಟನಾ ನಿರತರನ್ನು ಬಲವಂತವಾಗಿ ತೆರವುಗೊಳಿಸಲು ದೆಹಲಿ ಪೊಲೀಸರು ಯತ್ನಿಸಿದ್ದರು. ಆದರೆ ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರೆಸಲು ಅವಕಾಶ ನೀಡಲಾಗಿದೆ.
ಈ ಮಧ್ಯೆ, ಧರಣಿ ಸ್ಥಳದಿಂದ ಬಲವಂತವಾಗಿ ತಮ್ಮನ್ನು ತೆರವುಗೊಳಿಸುವ ವೇಳೆ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದು, ಇದು ಅಮಾನವೀಯ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಕಳೆದ ಎರಡು ತಿಂಗಳಿಂದ ಧರಣಿ ನಡೆಸುತ್ತಿರುವ ನಿವೃತ್ತ ಸೈನಿಕರು ಹೇಳಿದ್ದಾರೆ.
ನಮ್ಮ ಪ್ರತಿಭಟನೆ ಭದ್ರತೆಗೆ ಹೇಗೆ ಧಕ್ಕೆಯಾಗುತ್ತದೆ ಎಂದು ಪ್ರಶ್ನಿಸಿರುವ ನಿವೃತ್ತ ಯೋಧರು, ಸೇವೆಯಲ್ಲಿದ್ದಾಗ ದೇಶ ರಕ್ಷಣೆಗಾಗಿ ನಾವು ನಮ್ಮ ಜೀವವನ್ನೇ ಒತ್ತೆಯಿಟ್ಟಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ನಮ್ಮ ಸ್ವಾತಂತ್ರ್ಯವನ್ನು ಕಿತ್ತಿಕೊಂಡಿದ್ದು, ಇದು ನಮಗೆ ಕರಾಳ ಸ್ವಾತಂತ್ರ್ಯ ದಿನ ಎಂದು ನಿವೃತ್ತ ಗ್ರೂಪ್ ಕ್ಯಾಪ್ಟನ್ ವಿ.ಕೆ.ಗಾಂಧಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


