ಮಹಿಳಾ ಪ್ರತ್ಯೇಕತಾವಾದಿ ಸಂಘಟನೆಯಿಂದ ಕಾಶ್ಮೀರದಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶನ
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾದಿನ ಕಾಶ್ಮೀರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ.

ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನಾದಿನ ಕಾಶ್ಮೀರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ. ದುಕ್ತಾರನ್ ಇ ಮಿಲ್ಲತ್ ಎಂಬ ಮಹಿಳಾ ಮೂಲಭೂತವಾದಿ ಸಂಘಟನೆ ಕಾಶ್ಮೀರದಲ್ಲಿ ಪಾಕ್ ನ ಧ್ವಜಾರೋಹಣ ಮಾಡಿದೆ.
ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ ನೇತೃತ್ವದ ತಂಡವೊಂದು ಬಾಚ್ಪೋರಾ ಪ್ರದೇಶದಲ್ಲಿ ಪಾಕಿಸ್ತಾನ ಧ್ವಜವನ್ನು ಹಾರಿಸಿದ್ದು ಪಾಕ್ ರಾಷ್ಟ್ರಗೀತೆಯನ್ನು ಹಾಡಲಾಗಿದೆ. ಕಳೆದ 2 ದಶಕಗಳಿಂದ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಯಂದು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪಾಕ್ ಧ್ವಜ ಹಾರಿಸುವುದು ತೀವ್ರಗೊಂಡಿದೆ.
1990 ರ ದಶಕದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನಂತಹ ಉಗ್ರ ಸಂಘಟನೆಗಳು ಪಾಕಿಸ್ತಾನ ಧ್ವಜಾರೋಹಣ ಮಾಡುತ್ತಿದ್ದವು. ಈಗ ಪ್ರತ್ಯೇಕತಾವಾದಿಗಳು ಪಾಕ್ ನ ಧ್ವಜಾರೋಹಣ ಮಾಡುತ್ತಿದ್ದಾರೆ. ಪಾಕಿಸ್ತಾನ ದಿನಾಚರಣೆ ವೇಳೆ ಕಾಶ್ಮೀರದಲ್ಲಿ ಪಾಕ್ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ ಅವರನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


