ಪ್ರಧಾನಮಂತ್ರಿಗಳ ಅರಬ್ ರಾಷ್ಟ್ರಗಳ ಪ್ರವಾಸ ಇಂದು ಆರಂಭ
ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ತಮ್ಮ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್(ಅರಬ್ ರಾಷ್ಟ್ರ) ಪ್ರವಾಸವನ್ನು...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ತಮ್ಮ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್(ಅರಬ್ ರಾಷ್ಟ್ರ) ಪ್ರವಾಸವನ್ನು ಆರಂಭಿಸಲಿದ್ದಾರೆ.
34 ವರ್ಷಗಳ ನಂತರ ಭಾರತೀಯ ಪ್ರಧಾನಿಯೊಬ್ಬರು ಗಲ್ಫ್ ರಾಷ್ಟ್ರಕ್ಕೆ ನೀಡುತ್ತಿರುವ ಪ್ರಥಮ ಭೇಟಿ ಇದಾಗಿದೆ.
ಅವರು ತಮ್ಮ ಭೇಟಿ ವೇಳೆ, ಅಲ್ಲಿನ ಪ್ರಧಾನಮಂತ್ರಿ ಹಾಗೂ ಉಪಾಧ್ಯಕ್ಷ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಭೇಟಿ ಮಾಡಲಿದ್ದಾರೆ. ಪ್ರಧಾನಮಂತ್ರಿಗಳು ತಮ್ಮ ಭೇಟಿ ಸಂದರ್ಭದಲ್ಲಿ, ಅಲ್ಲಿನ ಉನ್ನತ ನಾಯಕರೊಂದಿಗೆ ಉಭಯ ದೇಶಗಳ ಆರ್ಥಿಕತೆ, ಸಾಂಸ್ಕೃತಿಕ ಮತ್ತು ಸಾಮಾಜಿಕ ಹಾಗೂ ಇಂಧನ ವಲಯಗಳ ಪರಸ್ಪರ ಸಹಕಾರ ಮತ್ತು ಬಾಂಧವ್ಯ ವೃದ್ಧಿಯನ್ನು ಕೋರಲಿದ್ದಾರೆ. ನಂತರ ಮೋದಿಯವರು ಅಲ್ಲಿರುವ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ಅವರು ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬು ದಾಬಿಗೆ ತಲುಪಲಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


