ನಿತೀಶ್ ಕುಮಾರ್ ಗೆ ಸನ್ಮಾನ ಮಾಡಲಿರುವ ದೆಹಲಿ ಸಿಎಂ ಕೇಜ್ರಿವಾಲ್
ಆ.19 ಕ್ಕೆ ನಡೆಯಲಿರುವ ಬಿಹಾರ್ ಸಮ್ಮಾನ್ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಸನ್ಮಾನ ಮಾಡಲಿದ್ದಾರೆ.

ನವದೆಹಲಿ: ಆ.19 ಕ್ಕೆ ನಡೆಯಲಿರುವ ಬಿಹಾರ್ ಸಮ್ಮಾನ್ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಸನ್ಮಾನ ಮಾಡುವುದನ್ನು ಜೆಡಿಯು ಪಕ್ಷದ ಮುಖಂಡ ಕೆ.ಸಿ ತ್ಯಾಗಿ ಖಚಿತಪಡಿಸಿದ್ದಾರೆ.
ನವದೆಹಲಿಯಲ್ಲಿರುವ ಮಾವ್ಲಂಕರ್ ಹಾಲ್ ನಲ್ಲಿ ಬಿಹಾರ ಸಮ್ಮಾನ್ ಸಮಾರಂಭ ನಡೆಯಲಿದ್ದು, ಕೇಜ್ರಿವಾಲ್, ನಿತೀಶ್ ಕುಮಾರ್ ಅವರನ್ನು ಸನ್ಮಾನ ಮಾಡಲಿದ್ದಾರೆ. ದೆಹಲಿ ಸಿಎಂ ಬಿಹಾರದ ಜೆಡಿಯು ಗೆ ಬೆಂಬಲ ನೀಡಿದ್ದು, ನಿತೀಶ್ ಕುಮಾರ್ ಪರವಾಗಿ ಬಿಹಾರದಲ್ಲಿ ಆಮ್ ಆದ್ಮಿ ಪಕ್ಷ ಬಿಹಾರದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಕೆ.ಸಿ ತ್ಯಾಗಿ ಹೇಳಿದ್ದಾರೆ.
ಚುನಾವಣಾ ಕಣವಾಗಿರುವ ಬಿಹಾರದಲ್ಲಿ ನಿತೀಶ್ ಕುಮಾರ್ ತಮ್ಮ ರಾಜಕೀಯ ಜೀವನದ ಅತ್ಯಂತ ಕಠಿಣ ಸವಾಲು ಎದುರಿಸುತ್ತಿದ್ದಾರೆ. ಈ ಹಿಂದೆ ದೆಹಲಿಗೆ ಪೂರ್ಣಪ್ರಮಾಣದ ರಾಜ್ಯದ ಸ್ಥಾನಮಾನ ನೀಡುವ ವಿಚಾರದಲ್ಲಿ ಅರವಿಂದ್ ಕೇಜ್ರಿವಾಲ್ ಗೆ ನಿತೀಶ್ ಕುಮಾರ್ ಬೆಂಬಲ ನೀಡಿದ್ದರು. ಈಗ ಬಿಹಾರ ಚುನಾವಣೆ ನಡೆಯಲಿದ್ದು ಅರವಿಂದ್ ಕೇಜ್ರಿವಾಲ್ ನಿತೀಶ್ ಕುಮಾರ್ ಗೆ ಬೆಂಬಲ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


