ದೇಶ

ಒಆರ್ ಒಪಿ ಜಾರಿಗೆ ಆಗ್ರಹಿಸಿ 24 ರಿಂದ ಉಪವಾಸ

ನರೇಂದ್ರ ಮೋದಿ ಅವರ ನಿಲುವಿನಿಂದ ತೀವ್ರ ಅಸಮಾಧಾನಗೊಂಡಿರುವ ನಿವೃತ್ತ ಸೇನಾನಿಗಳು, ಆ. 24 ರಿಂದ ಅನಿರ್ಧಿಷ್ಟಾವಧಿ ಉಪವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಒಆರ್ ಒಪಿ ಜಾರಿಗೆ ಆಗ್ರಹಿಸಿ 24  ರಿಂದ ಉಪವಾಸ
ಒಆರ್ ಒಪಿ ಜಾರಿಗೆ ಆಗ್ರಹಿಸಿ ನಿವೃತ್ತ ಸೇನಾನಿಗಳಿಂದ ಪ್ರತಿಭಟನೆ(ಸಂಗ್ರಹ ಚಿತ್ರ)
Published On :

ನವದೆಹಲಿ: ಸಮಾನ ಹುದ್ದೆ ಸಮಾನ ಪಿಂಚಣಿ(ಒಆರ್ ಒಪಿ)  ಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವಿನಿಂದ ತೀವ್ರ ಅಸಮಾಧಾನಗೊಂಡಿರುವ ನಿವೃತ್ತ ಸೇನಾನಿಗಳು, ಆ. 24 ರಿಂದ ಅನಿರ್ಧಿಷ್ಟಾವಧಿ ಉಪವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

24 ರಿಂದ ನಿವೃತ್ತ ಯೋಧರ ಒಂದು ತಂಡ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಿದೆ ಎಂದು ನಿವೃತ್ತ ಕರ್ನಲ್ ಅನಿಲ್ ಕೌಲ್ ತಿಳಿಸಿದ್ದಾರೆ.

ನವದೆಯಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ 64 ನೇ ದಿನ ಪೂರೈಸಿದೆ. ಸ್ವಾತಂತ್ರ್ಯ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಏರ್ಪಡಿಸಿದ್ದ ಚಹಾಕೂಟಕ್ಕೆ ಗೈರಾದ ಆಪ್ ಶಾಸಕ ಕರ್ನಲ್ ದೇವಿಂದರ್ ಸೇಹ್ರಾವತ್, ಒಆರ್ ಒಪಿಗೆ ಸಂಬಂಧಿಸಿ ಮಧ್ಯಪ್ರವೇಶಿಸಬೇಕೆಂದು ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.