ದೇಶ

ಬರ ತಾಲೂಕುಗಳು 114ಕ್ಕೆ ಏರಿಕೆ

ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಬರದ ಪರಿಸ್ಥಿತಿ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 98ರಿಂದ 114ಕ್ಕೆ ಹೆಚ್ಚಾಗಿದೆ. ಬರ ಪರಿಹಾರ ತುರ್ತು ಕಾಮಗಾರಿ ಕೈಗೊಳ್ಳಲು ರು.149 ಕೋಟಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ...

ಬರ ತಾಲೂಕುಗಳು 114ಕ್ಕೆ ಏರಿಕೆ
ಬರ ತಾಲೂಕುಗಳು 114ಕ್ಕೆ ಏರಿಕೆ ( ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಬರದ ಪರಿಸ್ಥಿತಿ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 98ರಿಂದ 114ಕ್ಕೆ ಹೆಚ್ಚಾಗಿದೆ. ಬರ ಪರಿಹಾರ ತುರ್ತು ಕಾಮಗಾರಿ ಕೈಗೊಳ್ಳಲು ರು.149 ಕೋಟಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ರಾಜ್ಯದ 26 ಜಿಲ್ಲೆಗಳ 114 ತಾಲೂಕುಗಳಲ್ಲಿ ಬರ ಇದೆ. ಆಗಸ್ಟ್ ಅಂತ್ಯದ ವೇಳೆಗೆ ಮತ್ತಷ್ಟು ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ. ಕುಡಿಯುವ ನೀರು ಪೂರೈಕೆಗೆ ಬೋರ್
ವೆಲ್ ಕೊರೆಸಲು ರು.75 ಕೋಟಿ, ಉದ್ಯೋಗ ಖಾತರಿಗೆ ರು.50 ಕೋಟಿ ಸೇರಿದಂತೆ ತುರ್ತು ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾ- ಗಿದೆ ಎಂದು ಸುದ್ದಿಗಾರರಿಗೆ ಸೋಮವಾರ
ಹೇಳಿದರು.

ರಾಜ್ಯದ 6000 ಗ್ರಾಮ ಪಂಚಾಯಿತಿಗಳ ವಿಶೇಷ ಗ್ರಾಮಸಭೆ ಆ.20 ರಂದು ನಡೆಯಲಿದ್ದು, ಮುಖ್ಯಮಂತ್ರಿ-ಯವರು ಎಲ್ಲ ಹಂತದ ಜನಪ್ರತಿನಿಧಿಗಳು ಈ ಗ್ರಾಮ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಇದೇ ಮೊಟ್ಟ ಮೊದಲ ಬಾರಿ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ವಿವಿಧ ಹಂತಗಳ ನಾಯಕರು ಗ್ರಾಮಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.