ಕಲ್ಲಿದ್ದಲು ಹಗರಣ: ವಿಜಯ್ ದರ್ದಾ ಸೇರಿ ಐವರಿಗೆ ಜಾಮೀನು
ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಹಾಗೂ ಇತರೆ ಐವರಿಗೆ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ...

ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ವಿಜಯ್ ದರ್ದಾ ಹಾಗೂ ಇತರೆ ಐವರಿಗೆ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.
ಕಲ್ಲಿದ್ದಲು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಭರತ್ ಪರಶರ್ ಅವರಿದ್ದ ಪೀಠ, ವಿಜಯ್ ದರ್ದಾ, ಅವರ ಮಗ ದೇವೇಂದ್ರ ದರ್ದಾ, ಗುಪ್ತಾ, ಕಲ್ಲಿದ್ದಲು ಸಚಿವಾಲಯದ ಅಧಿಕಾರಿ ಕೆ.ಎಸ್.ಕ್ರೊಪಾ, ಕೆ.ಸಿ.ಸಮ್ರಿಯಾ ಮತ್ತು ಮನೋಜ್ ಕುಮಾರ್ ಜಯಸ್ವಾಲ್ ಅವರಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ಪ್ರತಿಯೊಬ್ಬ ಆರೋಪಿಯೂ 1 ಲಕ್ಷ ಶೂರಿಟಿ ನೀಡುವಂತೆ ಹೇಳಿದೆ.
ಕಲ್ಲಿದ್ದಲು ಹಗರಣ ಕುರಿತಂತೆ ಹಲವು ವಿವಾದಗಳು ಸೃಷ್ಟಿಯಾಗಿದ್ದವು. ಹೀಗಾಗಿ ಪ್ರಕರಣವನ್ನು ಕಳೆದ ವರ್ಷ ನವೆಂಬರ್ 20 ರಂದು ಸಿಬಿಐ ತನಿಖೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ಕೈಗೊಂಡ ಸಿಬಿಐ ಅಧಿಕಾರಿಗಳು ಆರೋಪಪಟ್ಟಿಯಲ್ಲಿ, ದರ್ದಾ, ಅವರ ಪುತ್ರ ದೇವೇಂದ್ರ ದರ್ದಾ, ಜೆಲ್ ಡಿ ಯವತ್ಮಾಲ್ ಎನರ್ಜಿ ಪ್ರೈ.ಲಿ. ಮತ್ತು ಅದರ ನಿರ್ದೇಶಕ ಮನೋಜ್ ಜೈಸ್ವಾಲ್ ಅವರನ್ನು ಹೆಸರಿಸಿದ್ದರು. ಅರೋಪಪಟ್ಟಿಯಲ್ಲಿ ಇವರೆಲ್ಲರೂ ಮೋಸದಿಂದ ಕಲ್ಲಿದ್ದಲು ಬ್ಲಾಕ್ಗಳನ್ನು ಪಡೆದಿದ್ದಾರೆ ಎಂದೂ ಆರೋಪಿಸಲಾಗಿತ್ತು. ಆರೋಪಪಟ್ಟಿಯನ್ನು ಪರಿಶೀಲಿಸಿದ ವಿಶೇಷ ನ್ಯಾಯಾಲಯವು ಜುಲೇ 31 ರಂದು ಆರೋಪಿಗಳೆಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


