ದೇಶ

ಹೈದರಾಬಾದ್‌ನಲ್ಲಿ ಹಾಡಹಗಲೇ ಗುಂಡಿನ ದಾಳಿ

ಹಾಡಹಗಲೇ ದರೋಡೆಕೋರರು ಸಾರ್ವಜನಿಕವಾಗಿ ಗುಂಡು ಹಾರಿಸಿದ ಘಟನೆ ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್‌ನಲ್ಲಿ ಗುರುವಾರ ನಡೆದಿದೆ.

ಹೈದರಾಬಾದ್‌ನಲ್ಲಿ ಹಾಡಹಗಲೇ ಗುಂಡಿನ ದಾಳಿ
ಸಾಂದರ್ಭಿಕ ಚಿತ್ರ
Published On :

ಹೈದರಾಬಾದ್: ಹಾಡಹಗಲೇ ದರೋಡೆಕೋರರು ಸಾರ್ವಜನಿಕವಾಗಿ ಗುಂಡು ಹಾರಿಸಿದ ಘಟನೆ ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್‌ನಲ್ಲಿ ಗುರುವಾರ ನಡೆದಿದೆ.

ಇಂದು ಮಧ್ಯಾಹ್ನ ಜ್ಯುಬಿಲಿ ಹಿಲ್ಸ್‌ನ ನಿರೂಸ್ ಬಟ್ಟೆಯಂಗಡಿ ಬಳಿ ಈ ಘಟನೆ ನಡೆದಿದ್ದು, ದರೋಡೆಕೋರರು ತಮ್ಮನ್ನು ಬೆನ್ನಟ್ಟಿ ಬಂದ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕವಾಗಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓರ್ವ ದರೋಡೆಕೋರರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇತರ ಮೂವರು ತಪ್ಪಿಸಿಕೊಂಡಿದ್ದಾರೆ. ದರೋಡೆಕೋರರ ತಂಡದಲ್ಲಿದ್ದ ಎಲ್ಲರೂ ಕಲಬುರಗಿ ಜಿಲ್ಲೆಯವರಾಗಿದ್ದು, ಐದು ದಿನಗಳ ಹಿಂದೆ ಬ್ಯಾಂಕ್ ದರೋಡೆ ಮಾಡುವ ಉದ್ದೇಶದಿಂದ ನಗರಕ್ಕೆ ಬಂದಿದ್ದರು ಎನ್ನಲಾಗಿದೆ. ಈ ಸಂಬಂಧ ಜ್ಯುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.