ಅಂತಾರಾಷ್ಟ್ರೀಯ ಜಾಹೀರಾತು ಸಂಸ್ಥೆಯ ಬೆಳ್ಳಿಹಬ್ಬಕ್ಕೆ ಸಚಿನ್, ಶಾರೂಕ್
ಅಂತಾರಾಷ್ಟ್ರೀಯ ಜಾಹೀರಾತು ಸಂಸ್ಥೆಯ ಭಾರತದ ಆವೃತ್ತಿಯ ಬೆಳ್ಳಿ ಹಬ್ಬದ ಅಂಗವಾಗಿ ಅದರ ಮೂರು ದಿನಗಳ ಸಭೆಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್...

ಕೊಚ್ಚಿ: ಅಂತಾರಾಷ್ಟ್ರೀಯ ಜಾಹೀರಾತು ಸಂಸ್ಥೆಯ ಭಾರತದ ಆವೃತ್ತಿಯ ಬೆಳ್ಳಿ ಹಬ್ಬದ ಅಂಗವಾಗಿ ಅದರ ಮೂರು ದಿನಗಳ ಸಭೆಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಬಾಲಿವುಡ್ ನಟ ಶಾರೂಕ್ ಖಾನ್ ಉತ್ಪನ್ನಗಳ ಬ್ರ್ಯಾಂಡ್ ಉಸ್ತುವಾರಿಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.
ಸೆಪ್ಟೆಂಬರ್ 3ರಿಂದ 5ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಜಾಹೀರಾತು ಮತ್ತು ಮಾರ್ಕೆಟಿಂಗ್ ನ ಅನುಭವಸ್ಥರು, ಬ್ರಾಂಡ್ ಅಂಬಾಸಿಡರ್ ಗಳು, ಗಣ್ಯರನ್ನು ಒಂದೇ ವೇದಿಕೆಯಲ್ಲಿ ನೋಡಬಹುದು ಎಂದು ಸಂಘಟಕರು ಹೇಳಿದ್ದಾರೆ.
''ಮುಂದೆ ಏನು ಬರುತ್ತದೆ'' ಎಂಬ ಘೋಷ ವಾಕ್ಯ ಹಾಗೂ ''ಬದಲಾವಣೆ ಭವಿಷ್ಯವನ್ನು ರೂಪುಗೊಳಿಸುತ್ತದೆ'' ಎಂಬ ಉಪ ಘೋಷ ವಾಕ್ಯದೊಂದಿಗೆ ಈ ಬಾರಿಯ ಸಭೆ ನಡೆಯಲಿದೆ.ಕೇರಳ ರಾಜ್ಯದಲ್ಲಿ ಇದುವರೆಗೆ ನಡೆದ ಎಲ್ಲಾ ಮಾರುಕಟ್ಟೆ ಮತ್ತು ಸಂವಹನ ಕಾರ್ಯಕ್ರಮಗಳಲ್ಲಿ ಅತಿ ಬೃಹತ್ ಕಾರ್ಯಕ್ರಮ ಇದಾಗಿರಲಿದೆ ಎಂದು ಸಂಸ್ಥೆಯ ಭಾರತೀಯ ಆವೃತ್ತಿಯ ಅಧ್ಯಕ್ಷ ಶ್ರೀನಿವಾಸನ್ ಸ್ವಾಮಿ ತಿಳಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಮತ್ತು ಶಾರೂಕ್ ಖಾನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರಿಕೆಟ್ ಮತ್ತು ಚಲನಚಿತ್ರ ಹೊರತುಪಡಿಸಿ ಪ್ರಚಾರ ರಾಯಭಾರಿಗಳಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ.
ಬೇರೆ ಬೇರೆ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಜಗತ್ತಿನ ಪ್ರಮುಖ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


