ತೆರಿಗೆ ವಂಚನೆ: ಸ್ಪೈಸ್ ಜೆಟ್, ಕಲಾನಿಧಿ ಮಾರನ್ಗೆ ನೂತನ ಸಮನ್ಸ್
ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೈಸ್ ಜೆಟ್ ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷ ಕಲಾನಿಧಿ ಮಾರನ್ ಅವರಿಗೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್...

Published On :
ನವದೆಹಲಿ: ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೈಸ್ ಜೆಟ್ ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷ ಕಲಾನಿಧಿ ಮಾರನ್ ಅವರಿಗೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನೂತನ ಸಮನ್ಸ್ ಜಾರಿ ಮಾಡಿದೆ.
ಆದಾಯ ತೆರಿಗೆ ಇಲಾಖೆಗೆ ಮೂಲದಲ್ಲಿ ಕಡಿತ ಮಾಡಿದ ತೆರಿಗೆ(ಟಿಡಿಎಸ್) ಪಾವತಿ ಮಾಡಲು ವಿಫಲವಾದ ಆಪಾದನೆಯಲ್ಲಿ ದಾಖಲಿಸಲಾದ ತೆರಿಗೆ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿ ಪ್ರೀತಂ ಸಿಂಗ್ ಸೆಪ್ಟೆಂಬರ್ 21ರಂದು ಕೋರ್ಟ್ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.
ಆಗಸ್ಟ್ 21 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ ಗೆ ಒದಗಿಸುವಂತೆ ಸೂಚಿಸಲಾಗಿತ್ತು. ಇಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್. ನಟರಾಜನ್ ಅವರು ಯಾವುದೇ ದಾಖಲೆಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಮುಂದಿನ ಸೆಪ್ಟೆಂಬರ್ 21ಕ್ಕೆ ಹಾಜರಾಗುವಂತೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhiಸಮನ್ಸ್ಸ್ಪೈಸ್ ಜೆಟ್SpiceJetKalanithi Maranಕಲಾನಿಧಿ ಮಾರನ್Fresh SummonsTax Evasion Caseತೆರಿಗೆ ವಂಚನೆ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


