ದೇಶ

ಕದನ ವಿರಾಮ ಉಲ್ಲಂಘಿಸುತ್ತಿರುವುದು ಭಾರತ: ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಆರೋಪ

ಭಾರತವೇ ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.

ಕದನ ವಿರಾಮ ಉಲ್ಲಂಘಿಸುತ್ತಿರುವುದು ಭಾರತ: ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಆರೋಪ
ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ
Published On :

ಇಸ್ಲಾಮಾಬಾದ್: ಭಾರತವೇ ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.

ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಾತುಕತೆಗೆ ಸಂಬಂಧಿಸಿದಂತೆ ಪಾಕ್ ಎನ್ಎಸ್ಎ ಸರ್ತಾಜ್ ಅಜೀಜ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಏಜಾಜ್ ಅಹಮದ್ ಚೌಧರಿ, ಕದನ ವಿರಾಮ ಉಲ್ಲಂಘನೆ ನಡೆಯುತ್ತಿರುವುದು ಭಾರತದಿಂದ, ಕಳೆದ ಎರಡು ತಿಂಗಳಲ್ಲಿ ಭಾರತ 100 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ.

ಸಶಸ್ತ್ರಪಡೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದರಿಂದ ಪಾಕಿಸ್ತಾನದ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಭಾರತ ಮಾತ್ರ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದು 2003 ರ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸುತ್ತಿದೆ ಎಂದು ಎಂದು ಏಜಾಜ್ ಅಹಮದ್ ಚೌಧರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.