ದಾವೂದ್ ವಿರುದ್ಧ ದಾಖಲೆ ಪತ್ತೆ: ಭೂಗತ ಪಾತಕಿಯನ್ನು ಭಾರತಕ್ಕೆ ಒಪ್ಪಿಸಿ- ಕೇಂದ್ರ ಸರ್ಕಾರ
1993ರ ಮುಂಬೈ ಸರಣಿ ಸ್ಪೋಟದ ರುವಾರಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇರುವ ಬಗ್ಗೆ ಭಾರತೀಯ ಭದ್ರತಾ ಸಂಸ್ಥೆ ಮಾಹಿತಿ ಹೊಸ ಸಾಕ್ಷ್ಯಗಳನ್ನು ಕಲೆಹಾಕಿದ್ದು, ಪಾಕಿಸ್ತಾನ ಈಗಲಾದರೂ ದಾವೂದ್ ಇಬ್ರಾಹಿಂನನ್ನು ಭಾರತದ ವಶಕ್ಕೆ ಒಪ್ಪಿಸಬೇಕು...

ನವದೆಹಲಿ: 1993ರ ಮುಂಬೈ ಸರಣಿ ಸ್ಪೋಟದ ರುವಾರಿ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇರುವ ಬಗ್ಗೆ ಭಾರತೀಯ ಭದ್ರತಾ ಸಂಸ್ಥೆ ಮಾಹಿತಿ ಹೊಸ ಸಾಕ್ಷ್ಯಗಳನ್ನು ಕಲೆಹಾಕಿದ್ದು, ಪಾಕಿಸ್ತಾನ ಈಗಲಾದರೂ ದಾವೂದ್ ಇಬ್ರಾಹಿಂನನ್ನು ಭಾರತದ ವಶಕ್ಕೆ ಒಪ್ಪಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು
ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿಲ್ಲ ಎಂದು ಪಾಕಿಸ್ತಾನ ತನ್ನ ವಾದವನ್ನು ಮುಂದುವರೆಸಿಕೊಂಡು ಬಂದಿರುವ ಹಿನ್ನೆಲೆಯಲ್ಲೇ, ಭಾರತೀಯ ಭದ್ರತಾ ಸಂಸ್ಥೆ ದಾವೂದಾ ಪಾಕಿಸ್ತಾನದಲ್ಲೇ ಇದ್ದಾನೆ ಎಂಬುದನ್ನು ಸಾಬೀತು ಪಡಿಸಲು ಆತನ ಪಾಸ್ ಪೋರ್ಟ್ ಹಾಗೂ ಪತ್ನಿಯ ಫೋನ್ ಬಿಲ್ ನಲ್ಲಿ ಪಾಕಿಸ್ತಾನದ ಕರಾಚಿ ವಿಳಾಸವಿರುವ ದಾಖಲೆಯೊಂದನ್ನು ಬಹಿರಂಗ ಪಡಿಸಿದೆ.
ದಾವೂದ್ ದಾಖಲೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವೆಂಕಯ್ಯನಾಯ್ಡು ಅವರು, ದಾವೂದ್ ಪಾಕ್ ನಲ್ಲಿ ಇಲ್ಲ ಎಂದು ಪಾಕಿಸ್ತಾನ ಹೇಳುತ್ತಲೇ ಬರುತ್ತಿದೆ. ಆದರೆ, ಇದೀಗ ಆತ ಪಾಕಿಸ್ತಾನದಲ್ಲೇ ಇರುವ ಕುರಿತಂತೆ ಭಾರತೀಯ ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದು, ಪಾಕಿಸ್ತಾನ ಈ ಪುರಾವೆಗಳನ್ನು ಅಲ್ಲಗೆಳೆಯುವಂತಿಲ್ಲ. ಪಾಕಿಸ್ತಾನ ಈಗಾಗಲಾದರೂ ಅರ್ಥ ಮಾಡಿಕೊಂಡು ದಾವೂದ್ ನನ್ನು ಭಾರತದ ವಶಕ್ಕೆ ನೀಡಬೇಕೆಂದು ಹೇಳಿದ್ದಾರೆ.
ಶಿವಸೇನಾ ನಾಯಕ ಸಂಜಯ್ ರಾವತ್ ಮಾತನಾಡಿ, ದಾವೂದ್ ನ ಹೊಸ ಫೋಟೋಯಿಂದ ಏನೂ ಸಾಧ್ಯವಾಗಲ್ಲ. ಈ ಹಿಂದೆಯೂ ಪಾಕಿಸ್ತಾನ ದಾವೂದ್ ಪಾಕಿಸ್ತಾನದಲ್ಲೇ ಇರುವ ದಾಖಲೆಗಳನ್ನೂ ತಿರಸ್ಕರಿಸಿತ್ತು. ಎನ್ ಡಿಎ ಸರ್ಕಾರ ಇದೀಗ ಮತ್ತೆ ಪಾಕಿಸ್ತಾನದೊಂದಿಗೆ ಮಾತುಕತೆಗೆ ಮುಂದಾಗಿದೆ. ಎನ್ ಡಿಎ ಸರ್ಕಾರ ಮತ್ತೆ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


