ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಚಕಮಕಿ: ಮೂವರು ಉಗ್ರಗಾಮಿಗಳ ಸಾವು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ ವಾರಾ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ಮಧ್ಯೆ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ ವಾರಾ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರಗಾಮಿಗಳು ಹತರಾಗಿದ್ದು, ಯೋಧರೊಬ್ಬರಿಗೆ ಗಾಯಗಳಾಗಿವೆ.
ಕಳೆದ ರಾತ್ರಿ ಆರಂಭಗೊಂಡ ಗುಂಡಿನ ಚಕಮಕಿ ಇಂದು ಮುಂಜಾನೆಯವರೆಗೂ ಮುಂದುವರಿದಿದೆ.ಭಾರತ ಮತ್ತು ಪಾಕಿಸ್ತಾನ ನಡುವಣ ಗಡಿ ನಿಯಂತ್ರಣ ರೇಖೆ ದಾಟಿ ಬಂದ ಉಗ್ರಗಾಮಿಗಳು ಕದನ ವಿರಾಮ ಉಲ್ಲಂಘಿಸಿ ಬಂದಾಗ ಯೋಧರೊಂದಿಗೆ ನಡೆದ ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ.
ಈ ತಿಂಗಳ ಆರಂಭದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಉದಂಪುರ್ ಬಳಿ ಇಬ್ಬರು ಗಡಿ ಭದ್ರತಾ ಪಡೆ ಯೋಧರನ್ನು ಕೊದು ಅನೇಕ ಮಂದಿ ಸೈನಿಕರನ್ನು ಗಾಯಗೊಳಿಸಿದ್ದ ಪಾಕಿಸ್ತಾನಿ ಉಗ್ರ ನಾವೀದ್ ನನ್ನು ಬಂಧಿಸಲಾಗಿತ್ತು. ಆತನ ಸಹಚರರು ತಪ್ಪಿಸಿಕೊಂಡಿದ್ದರು.
ಲಷ್ಕರ್-ಎ-ತಯ್ಯಬಾ ಗುಂಪಿನ ಪ್ರಮುಖ ನಾಯಕ ಮತ್ತು ಆತನ ಸಹಚರನನ್ನು ಪುಲ್ವಾಮಾ ಜಿಲ್ಲೆಯಲ್ಲಿ ಕೊಲ್ಲಲಾಗಿತ್ತು. ಕೆರನ್ ಮತ್ತು ತಂಗ್ ದಾರ್ ವಲಯಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಒಳನುಸುಳಿ ಬಂದಿದ್ದರು. ಆಗ ದಾಳಿ ನಡೆದು ಇಬ್ಬರು ಉಗ್ರಗಾಮಿಗಳು ಮತ್ತು ಓರ್ವ ಸೈನಿಕ ಹತರಾಗಿದ್ದರು. ಇತ್ತೀಚಿನ ದಿನಗಳಲ್ಲಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರಗಾಮಿಗಳ ಕೃತ್ಯ ಹೆಚ್ಚಾಗುತ್ತಲೇ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


