ಎನ್ಎಸ್ಎ ಮಾತುಕತೆ ರದ್ದು: ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ಅಸಮಾಧಾನ
ಜಮ್ಮು-ಕಾಶ್ಮೀರದ ರಾಜ್ಯ ರಾಜಕಾರಣದಲ್ಲಿ ಭಾರತ-ಪಾಕಿಸ್ತಾನ ನಡುವಿನ ಎನ್ಎಸ್ಎ ಮಾತುಕತೆ ರದ್ದುಗೊಂಡಿರುವ ಬಗ್ಗೆ ಆರೋಪ ಪ್ರಾತ್ಯಾರೋಪಗಳು ಕೇಳಿಬರುತ್ತಿವೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಾರತ-ಪಾಕಿಸ್ತಾನ ನಡುವಿನ ಎನ್ಎಸ್ಎ ಮಾತುಕತೆ ರದ್ದುಗೊಂಡಿರುವ ಬಗ್ಗೆ ಆರೋಪ ಪ್ರಾತ್ಯಾರೋಪಗಳು ಕೇಳಿಬರುತ್ತಿವೆ.
ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್, ಎನ್ಎಸ್ಎ ಮಾತುಕತೆ ರದ್ದುಗೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮಾತುಕತೆ ರದ್ದುಗೊಳ್ಳಲು ಪ್ರತ್ಯೇಕತಾವಾದಿಗಳೇ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.
ಪ್ರತ್ಯೇಕತಾವಾದಿಗಳೂ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಎನ್ಎಸ್ಎ ಸಭೆ ನಡೆಯದೇ ಇರುವುದಕ್ಕೆ ಭಾರತವೇ ಕಾರಣ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಎನ್ಎಸ್ಎ ಮಾತುಕತೆ ಉಭಯ ದೇಶಗಳ ಭವಿಷ್ಯವನ್ನು ಬದಲಾಯಿಸಲಿದೆ ಎಂದು ನಿರೀಕ್ಷಿಸಿದ್ದೆ. ಆದರೆ ಈ ಸಭೆ ರದ್ದುಗೊಂಡಿರುವುದು ತೀವ್ರ ಅಸಮಾಧಾನ ಮೂಡಿಸಿದ್ದು ಮಾತುಕತೆಯಲ್ಲಿನ ಬಿರುಕು ಕೇವಲ ತಾತ್ಕಾಲಿಕವಷ್ಟೇ ಎಂದು ಮುಫ್ತಿ ಮೊಹಮದ್ ಸಯಿದ್ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮಾತುಕತೆಗೆ ಸಮಯ ನಿಗದಿಪಡಿಸುವ ವಿಶ್ವಾಸವಿದೆ ಎಂದು ಮುಫ್ತಿ ಮೊಹಮದ್ ಸಯೀದ್ ಹೇಳಿದ್ದಾರೆ. ಇನ್ನು ಫಾರೂಕ್ ಅಬ್ದುಲ್ಲಾ ಕಾಶ್ಮೀರಿ ಪ್ರತ್ಯೇಕತಾವಾದಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದು ಸ್ವಯಂ ಘೋಷಿತ ಚಾಂಪಿಯನ್ ಗಳಾದ ಪ್ರತ್ಯೇಕತಾವಾದಿಗಳಿಂದಲೇ ಮಾತುಕತೆ ಮುರಿದುಬಿದ್ದಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


