ದೇಶ

300 ಉಗ್ರಗಾಮಿಗಳು ಭಾರತಕ್ಕೆ ನುಸುಳಲು ಯತ್ನ: ಗುಪ್ತಚರ ವರದಿ

ವಿಶ್ವದ ಪ್ರಮುಖ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ, ಜೈಶೆ-ಇ-ಮೊಹಮ್ಮದ್ ಮತ್ತು ಹಿಜ್ ಬುಲ್ ಮುಜಾಹಿದ್ದೀನ್ ಪಾಕ್ ...

300 ಉಗ್ರಗಾಮಿಗಳು ಭಾರತಕ್ಕೆ ನುಸುಳಲು ಯತ್ನ: ಗುಪ್ತಚರ ವರದಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ವಿಶ್ವದ ಪ್ರಮುಖ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ, ಜೈಶೆ-ಇ-ಮೊಹಮ್ಮದ್ ಮತ್ತು ಹಿಜ್ ಬುಲ್ ಮುಜಾಹಿದ್ದೀನ್ ಪಾಕ್ ಆಕ್ರಮಿತ ಕಾಶ್ಮೀರದಿಂದ ಭಾರತಕ್ಕೆ ನುಸುಳಲು ಯತ್ನಿಸುತ್ತಿವೆ. ಪಾಕಿಸ್ತಾನದ ಸೇನಾಪಡೆ ಮತ್ತು ಐಎಸ್ ಐ ನೆರವಿನಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 17 ಉಗ್ರಗಾಮಿ ಶಿಬಿರಗಳನ್ನು ನಡೆಸುತ್ತಿವೆ ಎಂಬ ಮಾಹಿತಿ ತಿಳಿದುಬಂದಿದೆ.

ಮೊನ್ನೆ ರದ್ದುಗೊಂಡ ಭಾರತ ಮತ್ತು ಪಾಕಿಸ್ತಾನ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆಯಲ್ಲಿ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಪಾಕಿಸ್ತಾನ ಸಲಹೆಗಾರ ಸರ್ತಾಜ್ ಅಜೀಜ್ ಅವರಿಗೆ ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ನೀಡುವುದರಲ್ಲಿದ್ದರು ಎಂದು ಸರ್ಕಾರಿ ಮೂಲಗಳು ಬಹಿರಂಗಪಡಿಸಿವೆ.

ಪಾಕಿಸ್ತಾನದ ಸೇನಾಪಡೆ ಮತ್ತು ಐಎಸ್ ಐ ನೆರವಿನಿಂದ ಅನೇಕ ಭಯೋತ್ಪಾದಕ ಸಂಘಟನೆಗಳು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಕ್ರಿಯವಾಗಿವೆ ಎಂದು ಭಾರತೀಯ ಗುಪ್ತಚರ ಸಂಸ್ಥೆಗೆ ಮಾಹಿತಿ ಸಿಕ್ಕಿದೆ.

ಉಗ್ರಗಾಮಿ ಸಂಘಟನೆಗಳ ಶಿಬಿರ ತಾಣಗಳು, ಅವು ಎಲ್ಲಿವೆ, ಯಾವ ವಿಷಯದಲ್ಲಿ ಸಕ್ರಿಯವಾಗಿವೆ, ಯಾರ ಸೂಚನೆ ಪ್ರಕಾರ ಕೆಲಸ ಮಾಡುತ್ತಾರೆ ಎಂಬ ಬಗ್ಗೆ ನಿಖರ ಮಾಹಿತಿಗಳಿವೆ ಎಂದು ಗುಪ್ತಚರ ಸಂಸ್ಥೆ ತಿಳಿಸಿದೆ.

ಉಗ್ರಗಾಮಿ ಶಿಬಿರದಲ್ಲಿ ಸುಮಾರು 300 ಮಂದಿ ಭಯೋತ್ಪಾದಕರು ತರಬೇತಿ ಪಡೆಯುತ್ತಿದ್ದು, ಶಸ್ತ್ರಸಜ್ಜಿತರಾಗಿ ಜಮ್ಮು-ಕಾಶ್ಮೀರದ ಒಳನುಗ್ಗಲು ಸಂಚು ನಡೆಸುತ್ತಿದ್ದಾರೆ ಎಂದು ದಾಖಲೆಗಳಲ್ಲಿ ಹೇಳಲಾಗಿದೆ.

ಇಷ್ಟಲ್ಲದೆ ಭಾರತ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ದಾಖಲೆಗಳನ್ನು ತಯಾರು ಮಾಡಿದ್ದು, ಅದರಲ್ಲಿ ಆತ ಪಾಕಿಸ್ತಾನದಲ್ಲಿ 9 ನಿವಾಸಗಳನ್ನು ಹೊಂದಿದ್ದಾನೆ, ಅವುಗಳಲ್ಲಿ ಒಂದು ಮನೆ ಮಾಜಿ ಪ್ರಧಾನಿ ಬೆನಜೀರ್ ಬುಟ್ಟೋ ಅವರ ಪುತ್ರ ಬಿಲಾವಲ್ ಬುಟ್ಟೋ ಜರ್ದಾರಿ ಅವರ ಮನೆಯ ಸಮೀಪವಿದೆ. ದಾವೂದ್ ಪಾಕಿಸ್ತಾನದಲ್ಲಿ ಅನೇಕ ಆಸ್ತಿಗಳನ್ನು ಹೊಂದಿದ್ದು ಅವನಿಗೆ ಐಎಸ್ ಐ ಸಂಸ್ಥೆಯ ಬೆಂಬಲವಿದೆ ಎಂದು ಭಾರತೀಯ ಗುಪ್ತಚರ ಸಂಸ್ಥೆ ಸಂಗ್ರಹಿಸಿದ ದಾಖಲೆಗಳು ಹೇಳುತ್ತವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.