ದೇಶ

ಕಾಶ್ಮೀರಿ ಉಗ್ರರು ಭಗತ್ ಸಿಂಗ್ ಇದ್ದಂತೆ; ಶಬೀರ್ ಶಾ

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ರಂತೆ ಕಾಶ್ಮೀರದ ಸಮಸ್ಯೆಗಾಗಿ ಉಗ್ರರು ತಮ್ಮ ಜೀವದ ಹಂಗು ತೊರೆದು ಹೋರಾಟ ನಡೆಸುತ್ತಿದ್ದಾರೆ...

ಕಾಶ್ಮೀರಿ ಉಗ್ರರು ಭಗತ್ ಸಿಂಗ್ ಇದ್ದಂತೆ; ಶಬೀರ್ ಶಾ
ಶಬೀರ್ ಶಾ
Published On :

ಶ್ರೀನಗರ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್  ರಂತೆ ಕಾಶ್ಮೀರದ ಸಮಸ್ಯೆಗಾಗಿ ಉಗ್ರರು ತಮ್ಮ ಜೀವದ ಹಂಗು ತೊರೆದು ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರತ್ಯೇಕತಾವಾದಿ ಶಬೀರ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೆಹಲಿಯಿಂದ ಶ್ರೀನಗರ ತಲುಪಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಬೀರ್ ಶಾ ಕಾಶ್ಮೀರ ಚಳುವಲಿಗೆ ಉಗ್ರರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದರು. ಇನ್ನೂ ಕಾಶ್ಮೀರ ಪ್ರತ್ಯೇಕತೆ ವಿಷಯವಾಗಿ ಚರ್ಚಿಸಲು ಪಾಕಿಸ್ತಾನ ಯಾವಾಗಲೂ ಬಾಗಿಲು ತೆರೆದಿರುತ್ತದೆ ಎಂದು ತಿಳಿಸಿದ್ದಾರೆ.

ಭಗತ್ ಸಿಂಗ್ ಅವರನ್ನು ಸ್ಮರಿಸುವಂತೆಯೇ ಕಾಶ್ಮೀರಿ ಉಗ್ರರನ್ನು ಸ್ಮರಿಸಲಾಗುತ್ತದೆ ಎಂದು ಹೇಳಿದ ಶಬೀರ್ ಶಾ, ಕಡ್ಡಾಯವಾಗಿ ಭಾರತ- ಪಾಕ್ ಮಾತುಕತೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.