ಆಪ್ ಸರ್ಕಾರದೊಂದಿಗೆ ದೆಹಲಿ ಪೊಲೀಸರ ಕಾಳಗ: ಮೋದಿ ಭೇಟಿ ಮಾಡಿದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ದೆಹಲಿ ಪೊಲೀಸರು ಸದಾ ತಮ್ಮ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ದೆಹಲಿ ಪೊಲೀಸರು ಸದಾ ತಮ್ಮ ಸರ್ಕಾರದೊಂದಿಗೆ ಕಾದಾಟಕ್ಕಿಳಿಯುತ್ತಾರೆ ಎಂದು ದೂರಿದ್ದಾರೆ. ಅಲ್ಲದೆ ತಮಗೆ ಕೇಂದ್ರ ಸರ್ಕಾರದ ಸಹಕಾರ ಸಿಕ್ಕರೆ ನಗರ ಪ್ರಕಾಶಿಸುತ್ತದೆ ಎಂದು ಹೇಳಿದ್ದಾರೆ.
ದೆಹಲಿ ಪೊಲೀಸ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಹಾಗೂ ತಮ್ಮ ನಡುವಿನ ತಿಕ್ಕಾಟಕ್ಕೆ ಸಂಬಂಧಿಸಿದಂತೆ ಇಂದು ಕೇಜ್ರಿವಾಲ್ ಪ್ರಧಾನಿಯನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ.
'ದೆಹಲಿ ಪೊಲೀಸರು ಆಪ್ ಸರ್ಕಾರದ ವಿರುದ್ಧ ಸಮರ ಸಾರಿದಂತಿದೆ ಎಂದಿರುವ ಕೇಜ್ರಿವಾಲ್, ಇದು ಪ್ರಜಾಪ್ರಭುತ್ವಕ್ಕೆ ಮಾರಕ' ಎಂದು ಹೇಳಿದ್ದಾರೆ.
ಮೋದಿ ಅವರು ಸಹ ಒಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದು ಬಂದವರು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ರಾಜ್ಯಪಾಲರಿಂದ ನನ್ನ ಹಾಗೆ ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹ ಪಡೆ(ಎಸ್ಸಿಬಿ) ಮೂಲಕ ದೆಹಲಿಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಿತ್ತು. ಆದರೆ ಈಗ ಎಸಿಬಿಗೆ ಒಬ್ಬ ಭ್ರಷ್ಟ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


