ಸಹೋದರಿ ಕೊಲೆ ಪ್ರಕರಣ: ಸ್ಟಾರ್ ಮಾಜಿ ಸಿಇಒ ಪತ್ನಿ ಇಂದ್ರಾಣಿ ಮುಖರ್ಜಿ ಬಂಧನ
ಸಹೋದರಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ಇಂಡಿಯಾದ ಮಾಜಿ ಸಿಇಒ ಪೀಟರ್ ಮುಖರ್ಜಿ ಅವರ ಪತ್ನಿ ಇಂದ್ರಾಣಿ ಮುಖರ್ಜಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ಮುಂಬೈ: ಸಹೋದರಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ಇಂಡಿಯಾದ ಮಾಜಿ ಸಿಇಒ ಪೀಟರ್ ಮುಖರ್ಜಿ ಅವರ ಪತ್ನಿ ಇಂದ್ರಾಣಿ ಮುಖರ್ಜಿ ಅವರನ್ನು ಮುಂಬೈ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ
2012ರಲ್ಲಿ ಇಂದ್ರಾಣಿ ಅವರ ಸಹೋದರಿ ಶೀನಾ ಬೋರಾ ಹತ್ಯೆಗೀಡಾಗಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಈ ವರೆಗೂ ಯಾವುದೇ ಮಾಹಿತಿಗಳು ಸಿಕ್ಕಿರಲಿಲ್ಲ. ಆದರೆ, ಇತ್ತೀಚೆಗಷ್ಟೇ ಕೆಲವು ದಿನಗಳ ಹಿಂದೆ ಅನುಮಾನ ಬಂದ ಕಾರಣ ಇಂದ್ರಾಣಿ ಅವರ ಕಾರು ಚಾಲಕನನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಕಾರು ಚಾಲಕ ಇಂದ್ರಾಣಿ ಅವರೇ ಸಹೋದರಿ ಶೀನಾ ಬೋರಾ ಅವರನ್ನು ಕೊಲೆ ಮಾಡಿದ್ದರು. ಶೀನಾ ಅವರ ದೇಹವನ್ನು ಮುಚ್ಚಿಡುವ ಸಲುವಾಗಿ ನನ್ನ ಸಹಾಯ ಕೇಳಿದರು. ನಂತರ ಇಬ್ಬರು ಸೇರಿ ಶೀನಾ ಅವರ ದೇಹವನ್ನು ರಾಯ್‌ಘಡದಲ್ಲಿರುವ ಅರಣ್ಯ ಪ್ರದೇಶದಲ್ಲಿ ಹೂತಿಡಲಾಯಿತು ಎಂದು ಹೇಳಿದ್ದ.
ಕಾರು ಚಾಲಕ ನೀಡಿದ ಮಾಹಿತಿ ಆಧಾರದ ಮೇಲೆ ಇದೀಗ ಇಂದ್ರಾಣಿ ಮುಖರ್ಜಿ ಅವರನ್ನು ಮುಂಬೈನ ಖಾರ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆ.31ರವರೆಗೆ ಕಸ್ಟಡಿಗೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


