ನಾವೇದ್ ಬಳಿಕ ಮತ್ತೊರ್ವ ಪಾಕ್ ಉಗ್ರನ ಜೀವಂತ ಸೆರೆ
ಗುಹೆಯೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ನಡೆಸಿದ ಭಾರತೀಯ ಭದ್ರತಾ ಪಡೆ ಯೋಧರು ಓರ್ವ ಉಗ್ರನನ್ನು...

Published On :
ಶ್ರೀನಗರ: ಗುಹೆಯೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ನಡೆಸಿದ ಭಾರತೀಯ ಭದ್ರತಾ ಪಡೆ ಯೋಧರು ಓರ್ವ ಉಗ್ರನನ್ನು ಜೀವಂತವಾಗಿ ಸೆರೆಹಿಡಿದ್ದಾರೆ.
ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಿ ಗುಹೆಯೊಂದರಲ್ಲಿ ಅಡಗಿ ಕುಳಿತ್ತಿದ್ದ ಐವರು ಉಗ್ರರ ವಿರುದ್ಧ ಬಿಎಸ್ಎಫ್ ಯೋಧರು ಕಾರ್ಯಾಚರಣೆ ಕೈಗೊಂಡಿದ್ದು, ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವನನ್ನು ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಜಮ್ಮು-ಕಾಶ್ಮೀರದ ರಫೀಯಾಬಾದ್ ನಲ್ಲಿ ಬಿಎಸ್ಎಫ್ ಪಡೆ ಬೆಳಗ್ಗಿನಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ. ಜೀವಂತವಾಗಿ ಸೆರೆ ಸಿಕ್ಕಿರುವ ಉಗ್ರ ಪಾಕಿಸ್ತಾನ ಮೂಲದ 22 ವರ್ಷದ ಸಜ್ಜಾದ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಲಷ್ಕರಿ ತೊಯ್ಬಾ ಸಂಘಟನೆಯ ಸದಸ್ಯನೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


