ಒಆರ್‍ಒಪಿ: ಕೇಂದ್ರದ ಆಹ್ವಾನ ತಿರಸ್ಕರಿಸಿದ ನಿವೃತ್ತ ಯೋಧರು
ಸಮಾನ ಹುದ್ದೆ, ಸಮಾನ ಪಿಂಚಣಿ ಯೋಜನೆ ಕುರಿತ ಗೊಂದಲಗಳು ಇನ್ನೂ ಮುಂದುವರಿದಿವೆ. ಕೆಲ ಬದಲಾವಣೆಗಳೊಂದಿಗೆ...

ನವದೆಹಲಿ: ಸಮಾನ ಹುದ್ದೆ, ಸಮಾನ ಪಿಂಚಣಿ ಯೋಜನೆ ಕುರಿತ ಗೊಂದಲಗಳು ಇನ್ನೂ ಮುಂದುವರಿದಿವೆ. ಕೆಲ ಬದಲಾವಣೆಗಳೊಂದಿಗೆ ಯೋಜನೆ ಜಾರಿಗೆ ತರುತ್ತೇವೆ ಎಂಬ ಕೇಂದ್ರ ಸರ್ಕಾರದ ಆಹ್ವಾನವನ್ನು ನಿವೃತ್ತ ಸೇನಾನಿಗಳು ತಿರಸ್ಕರಿಸಿದ್ದಾರೆ.
ಯಾವುದೇ ಕಾರಣಕ್ಕೂ ಯೋಜನೆಯನ್ನು ಬದಲಾವಣೆ ಮಾಡಲು ಬಿಡುವುದಿಲ್ಲ ಎಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಯೋಜನೆಯಲ್ಲಿ ಮೂರು ಅಂಶಗಳ ಬದಲಾವಣೆ ಮಾಡಲು ಹೊರಟಿದೆ ಎಂದು ಮೂಲಗಳು ಹೇಳಿವೆ. ಅಂದರೆ ಪ್ರತಿ ವರ್ಷ ಶೇ.3 ರಷ್ಟು ಹೆಚ್ಚಳದ ಬದಲಿಗೆ, 2011 ಅನ್ನು ಮೂಲವರ್ಷವಾಗಿ ಇಟ್ಟುಕೊಳ್ಳುವುದು.
2014ರ ಏಪ್ರಿಲ್ 1ರಿಂದ ಅರಿಯರ್ಸ್ ಸೇರಿ ಕೊಡುವ ಬದಲು, 2015ರ ಏಪ್ರಿಲ್ 1 ರಿಂದ ಜಾರಿಯಾಗುವಂತೆ ಮಾಡುವ ಬಗ್ಗೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಹೀಗಾಗಿ ನಾವು ಕೇಂದ್ರದ ಈ ಪ್ರಸ್ತಾಪ ತಿರಸ್ಕರಿಸಿದ್ದಾರೆ. ನಮ್ಮ ಹೋರಾಟವನ್ನು ಇನ್ನೂ ತೀವ್ರಗೊಳಿಸುತ್ತೇವೆ. ಸರ್ಕಾರದ ಇಂಥ ಲೆಕ್ಕಾಚಾರಗಳನ್ನೆಲ್ಲಾ ಒಪ್ಪಲು ಸಾಧ್ಯವಿಲ್ಲ ಎಂದು ನಿವೃತ್ತ ಸೈನಿಕರು ಹೇಳಿದ್ದಾರೆ.
ಮಂಗಳವಾರ ರಾತ್ರಿಯಷ್ಟೇ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು 2 ಗಂಟೆಗಳ ಕಾಲ, ನಿವೃತ್ತ ಸೇನಾನಿಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಿದ್ದರು. ಈ ಬಳಿಕವಷ್ಟೇ ಈ ಬೆಳವಣಿಗೆಗಳು ನಡೆದಿವೆ. ಹೀಗಾಗಿ ಆ. 28 ರಂದು 1965ರ ಪಾಕಿಸ್ತಾನ ವಿರುದ್ಧ ಯುದ್ಧದಲ್ಲಿ ಗೆದ್ದ ನೆನಪಿನ ದಿನ ಯೋಜನೆ ಘೋಷಿಸಬಹುದು ಎಂದು ಹೇಳಲಾಗಿತ್ತು. ಆದರೆ, ಈ ಬೆಳವಣಿಗೆಗಳ ಕಾರಣದಿಂದಾಗಿ ಆ. 28ಕ್ಕೂ ಘೋಷಣೆ ಜಾರಿಯಾಗಲ್ಲ ಎಂದೇ ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


